ರಾಜ್ಯದಲ್ಲಿ ಮಳೆ ಕೊರತೆ: 189 ತಾಲೂಕುಗಳಲ್ಲಿ ಬರದ ಛಾಯೆ: ಡಿಸಿಎಂ ಡಾ. ಪರಮೇಶ್ವರ್

ರಾಜಕೀಯ ಮಹಾನಗರ ರಾಜ್ಯ

Spread the love

ಬೆಂಗಳೂರು: ಮುಂಗಾರು ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ಉಲ್ಬಣಗೊಂಡಿದ್ದು, 240 ತಾಲೂಕುಗಳ ಪೈಕಿ 189 ತಾಲೂಕುಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ಉಭಯ ಸದನಗಳಲ್ಲಿ ಮಾತನಾಡಿದ ಅವರು, ಜೂನ್‌ 1ರಿಂದ ಆ.24ರವರೆಗೆ ರಾಜ್ಯದಲ್ಲಿ 654 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 454 ಮಿ.ಮೀ. ಮಳೆಯಾಗಿದ್ದು, ಶೇ.31ರಷ್ಟು ಮಳೆ ಕೊರತೆಯಾಗಿದೆ ಎಂದರು.

ಉತ್ತರ ಒಳನಾಡಿನಲ್ಲಿ ಶೇ.31, ದಕ್ಷಿಣ ಒಳನಾಡಿನಲ್ಲಿ ಶೇ.41, ಮಲೆನಾಡಿನಲ್ಲಿ ಶೇ.35 ಹಾಗೂ ಕರಾವಳಿ ಭಾಗದಲ್ಲಿ ಶೇ.24ರಷ್ಟು ಮಳೆ ಕೊರತೆ ದಾಖಲಾಗಿದೆ. ರಾಜ್ಯದ 240 ತಾಲೂಕುಗಳ ಪೈಕಿ 175 ತಾಲೂಕುಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ. ಇನ್ನು 14 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಕಂಡುಬಂದಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Leave a Reply

Your email address will not be published. Required fields are marked *