ಸೆ.4 ರಂದು ಕದ್ರಿಯಲ್ಲಿ ರಾಷ್ಟ್ರಮಟ್ಟದ ಮಕ್ಕಳ ಉತ್ಸವ, 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ: ಪ್ರದೀಪ್ ಕುಮಾರ್ ಕಲ್ಕೂರ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ಶಿರಸಿ

Spread the love

ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವುದರ ಜತೆಗೆ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಹಾಗೂ ಶ್ರೀಕೃಷ್ಣ ವೇಷ ಸ್ಪರ್ಧೆ ಸೆ.4 ರಂದು ಕದ್ರಿ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

44 ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಮಕ್ಕಳ ಉತ್ಸವದಲ್ಲಿ ಈ ಬಾರಿ 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. 12 ವೇದಿಕೆಗಳಲ್ಲಿ ಏಕಕಾಲದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಬೆಳಗ್ಗೆಯಿಂದ ರಾತ್ರಿ 12 ಗಂಟೆಯವರೆಗೆ ಕಾರ್ಯಕ್ರಮಗಳು ಮುಂದುವರಿಯಲಿವೆ ಎಂದರು.

ಸೆ.4ರಂದು ಬೆಳಗ್ಗೆ 9 ಗಂಟೆಗೆ ಶ್ರೀಕೃಷ್ಣ ವರ್ಣ ವೈಭವ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮಹಿಳೆಯರು ಸಾಂಪ್ರದಾಯಿಕವಾಗಿ ಹಾಡುಗಳನ್ನು ಹಾಡುತ್ತಾ ಕಡಗೋಲಿನಿಂದ ಮೊಸರು ಕಡೆದು ಬೆಣ್ಣೆ ತೆಗೆಯುವ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮಧ್ಯಾಹ್ನ 12ರಿಂದ ವಿವಿಧ ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 1 ಗಂಟೆಗೆ ನಂದಗೋಕುಲ ವೇದಿಕೆಯಲ್ಲಿ ಗಣ್ಯರು, ಪುಟಾಣಿ ಕೃಷ್ಣರು ಹಾಗೂ ಮಾತೆಯರ ಸಮ್ಮುಖದಲ್ಲಿ ದೀಪ ಪ್ರಜ್ವಲನದ ಮೂಲಕ ಶ್ರೀಕೃಷ್ಣ ಜನ್ಮ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ಆರು ತಿಂಗಳೊಳಗಿನ ಕಂದಮ್ಮಗಳನ್ನು ಮಹಿಳೆಯರು ಸಾಂಪ್ರದಾಯಿಕ ಶೈಲಿಯಲ್ಲಿ ತೊಟ್ಟಿಲಿಗೆ ಹಾಕಿ ಜೋಗುಳ ಹಾಡುವ ವಿಶೇಷ ಕಾರ್ಯಕ್ರಮವೂ ನಡೆಯಲಿದೆ ಎಂದರು.

ಮಧ್ಯಾಹ್ನ 12ರಿಂದ ರಾತ್ರಿ 12ರವರೆಗೆ ವಿವಿಧ ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶ್ರೀಕೃಷ್ಣ ವೇಷ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳುವ ಅವಕಾಶವಿದೆ ಎಂದು ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಲ್ಕೂರ ಪ್ರತಿಷ್ಠಾನದ ಕಚೇರಿ 0824-2492239, 9448125949, 9845083736 ಸಂಪರ್ಕಿಸಬಹುದು.

ಸಂಘಟಕರಾದ ಕದ್ರಿ ನವನೀತ ಶೆಟ್ಟಿ, ಡಾ. ಪ್ರಭಾಕರ ಜೋಶಿ, ಸುಧಾಕರ ರಾವ್ ಪೇಜಾವರ, ದಯಾನಂದ ಕಟೀಲು, ವಿಜಯಲಕ್ಷ್ಮೀ ಶೆಟ್ಟಿ, ಮಂಜುಳಾ ಶೆಟ್ಟಿ ಇದ್ದರು.

Leave a Reply

Your email address will not be published. Required fields are marked *