ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನೂತನ ಅಧ್ಯಕ್ಷರನ್ನಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಶನಿವಾರ ಅಧಿಸೂಚನೆ ಹೊರಡಿಸಿದೆ.
ಹಿಂದೆ ಅಧ್ಯಕ್ಷರಾಗಿದ್ದ ಸದಾಶಿವ ಉಲ್ಲಾಳ್ ಅವರ ಬದಲಿಗೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ನೇಮಕವು ತಕ್ಷಣದಿಂದ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



