ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಮಹಾ ನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಆರ್. ಚೇತನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು, ಸಾಂಪ್ರದಾಯಿಕವಾಗಿ ಪೊಲೀಸ್ ಇಲಾಖೆಯ ಬ್ಯಾಟನ್ ಅನ್ನು ಹಸ್ತಾಂತರಿಸುವ ಮೂಲಕ ಆರ್. ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಬಳಿಕ ನೂತನ ಪೊಲೀಸ್ ಮಹಾನಿರೀಕ್ಷಕ ಆರ್. ಚೇತನ್ ಅವರು ಅಧಿಕಾರ ವಹಿಸಿಕೊಂಡು ಪಶ್ಚಿಮ ವಲಯದ ಪೊಲೀಸ್ ಆಡಳಿತದ ಜವಾಬ್ದಾರಿಯನ್ನು ಸ್ವೀಕರಿಸಿದರು.
ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಪಶ್ಚಿಮ ವಲಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವುದು ಹಾಗೂ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತದೆ. ಪಶ್ಚಿಮ ವಲಯದಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುತ್ತದೆ. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ನಿಗಾ ವಹಿಸುವಂತೆ ಸೂಚನೆ ನೀಡಲಾಗುತ್ತದೆ. ಸಮಾಜ ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದು ತಿಳಿಸಿದರು.
What do you feel about this post?
Like
Love
Happy
Haha
Sad





