ರಾಜ್ಯ ವ್ಯಾಪಿ ಸಿಹಿತಿಂಡಿ ತಯಾರಿಕಾ ಘಟಕ ತಪಾಸಣೆ, ಎರಡು ಸಿಹಿತಿಂಡಿ ತಯಾರಿಕಾ ಘಟಕ ಬಂದ್: ಸಚಿವ ಖಾದರ್

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಸಿಹಿತಿಂಡಿ ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ, ಗುಣಮಟ್ಟ ಮತ್ತು ಆಹಾರದ ಶುದ್ಧತೆ ಕಾಪಾಡುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರ.

<

ಇತ್ತೀಚೆಗೆ ಆಹಾರ ಮತ್ತು ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯಲ್ಲಿ ಎರಡು ಸಿಹಿತಿಂಡಿ ತಯಾರಿಕಾ ಘಟಕಗಳನ್ನು ಮುಚ್ಚಲಾಗಿದ್ದು, ಉಳಿದ ಘಟಕಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಉತ್ತರ ಬಂದ ಬಳಿಕ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲಿನ ತಪಾಸಣೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಮಂಗಳೂರು, ಹುಬ್ಬಳ್ಳಿ, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ‘ತಪಾಸಣೆ ವೇಳೆ ತಪ್ಪು ಕಂಡುಬಂದ ಬಳಿಕ ಕ್ರಮ ಕೈಗೊಳ್ಳದಂತೆ ಕೇಳಿಕೊಂಡರೆ ನನ್ನಿಂದ ನಯಾಪೈಸೆಯ ಉಪಕಾರವೂ ಸಿಗುವುದಿಲ್ಲ. ಆಹಾರ ಸೇವಿಸುವವರ ಆರೋಗ್ಯವೇ ನಮಗೆ ಮುಖ್ಯ’ ಎಂದು ಅವರು ಸ್ಪಷ್ಟಪಡಿಸಿದರು.

ಯಾವುದೇ ರೀತಿಯ ಕಲಬೆರಕೆ ಮಾಡದೆ ಉತ್ತಮ ಗುಣಮಟ್ಟದ ಆಹಾರವನ್ನು ಗ್ರಾಹಕರಿಗೆ ಒದಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಆಹಾರ ತಯಾರಿಕಾ ಘಟಕಗಳು ಕಡ್ಡಾಯವಾಗಿ ಸ್ವಚ್ಛತೆ ಹಾಗೂ ಗುಣಮಟ್ಟದ ಮಾನದಂಡಗಳನ್ನು ಪಾಲಿಸಬೇಕು ಎಂದು ಸೂಚಿಸಿದರು.

ಆಹಾರದ ಗುಣಮಟ್ಟದ ಕುರಿತು ಗ್ರಾಹಕರಿಗೆ ದೂರು ನೀಡಲು ಕ್ಯೂಆರ್‌ ಕೋಡ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರ ಮೂಲಕ ಗ್ರಾಹಕರು ಸಮಸ್ಯೆಗಳನ್ನು ನೇರವಾಗಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ ಎಂದರು.

ಆಹಾರ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿರುವವರು ಗ್ರಾಹಕರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿಶೇಷವಾಗಿ ಪಿಜಿ ಮಾಲೀಕರು ಹಾಗೂ ಅಡುಗೆ ಸೇವೆ ಒದಗಿಸುವವರು ಉತ್ತಮ ಗುಣಮಟ್ಟದ, ಸ್ವಚ್ಛ ಹಾಗೂ ಸುರಕ್ಷಿತ ಆಹಾರವನ್ನು ಒದಗಿಸುವಂತೆ ಅವರು ಮನವಿ ಮಾಡಿದರು.

ರಾಜ್ಯದ ವಿವಿಧ ನಗರಗಳು ಹಾಗೂ ಜಿಲ್ಲೆಗಳಲ್ಲಿ ಆಹಾರ ತಯಾರಿಕಾ ಘಟಕಗಳ ತಪಾಸಣೆ ಮುಂದುವರೆಯಲಿದ್ದು, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜ ಸೇರಿದಂತೆ ಹಲವರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *