ಸುರತ್ಕಲ್: ಅಗರಮೇಲು ಜಾರಂದಾಯ ದೈವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಧ್ವಜಸ್ತಂಭಕ್ಕೆ ಎಳ್ಳೆಣ್ಣೆ ಸಮರ್ಪಣಾ ಸೇವೆ ಸೆ. 6ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.
ದೈವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಊರ ಹತ್ತು ಸಮಸ್ತರಿಂದ ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಲಿದ್ದು, ಬೆಳಿಗ್ಗೆ 11.30ಕ್ಕೆ ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಆಯೋಜಿಸಲಾಗಿದೆ.
ವೇದಮೂರ್ತಿ ಕೆ. ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ, ಪ್ರಧಾನ ಅರ್ಚಕರು, ಶ್ರೀ ಕ್ಷೇತ್ರ ಕಟೀಲು ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಾ. ವೈ. ಭರತ್ ಶೆಟ್ಟಿ, ಕೊಡಿಪಾಡಿ ಬಾಳಿಕೆ ಜಗನ್ನಾಥ ಅತ್ತಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚರಣ್ ಜೆ. ಶೆಟ್ಟಿ ಕುಳಾಯಿಗುತ್ತು ಹಾಗೂ ಕಾರ್ಯಾಧ್ಯಕ್ಷ ಡಾ. ಕೆ.ಪಿ.ಕೆ. ಹೆಗ್ಡೆ ಭಾಗವಹಿಸಲಿದ್ದಾರೆ.
ದೈವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ. ಟಿ. ರಮಾನಾಥ ಶೆಟ್ಟಿ, ಕಾರ್ಯದರ್ಶಿ ಐ. ಜಯ ಅಮೀನ್ ಹಾಗೂ ಕೋಶಾಧಿಕಾರಿ ಭೋಜ ದೇವಾಡಿಗ ಇದ್ದರು.
ಧ್ವಜಸ್ತಂಭಕ್ಕೆ ಸಮರ್ಪಿಸಲು ಅಗತ್ಯವಿರುವ ಶುದ್ಧ ಎಳ್ಳೆಣ್ಣೆಯನ್ನು ಕ್ಷೇತ್ರದಲ್ಲೇ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
What do you feel about this post?
Like
Love
Happy
Haha
Sad





