ಅಜ್ಞಾನದಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರು ಶಿಕ್ಷಕರು:ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲಾ ಸುದ್ದಿ ಉಡುಪಿ ಕುಂದಾಪುರ ಶಿಕ್ಷಣ

Spread the love

ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಬ್ರಹ್ಮಾವರ ವಲಯ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಮತ್ತು ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆಯಂತೆ ಶಿಕ್ಷಕರು ಕೇವಲ ಬೋಧಕರಲ್ಲ. ಮಕ್ಕಳಲ್ಲಿ ರಾಷ್ಟ್ರಪ್ರೇಮ, ಪ್ರತಿಭೆ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಆಸ್ತಿಯನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಮಕ್ಕಳ ತಪ್ಪು-ಒಪ್ಪುಗಳನ್ನು ತಿದ್ದಿ ಅವರನ್ನು ಸುಸಂಸ್ಕೃತರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು.

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ನಿವೃತ್ತ ಪ್ರಾಂಶುಪಾಲ ಬಿ. ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ಮಾತನಾಡಿದರು.

ಶಿಕ್ಷಕರಿಗೆ ಸನ್ಮಾನ:

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಗಣೇಶ್, ರವಿ, ಉಷಾಕುಮಾರಿ, ಲೀಲಾವತಿ ನಾಯ್ಕ, ಸುವಾಸಿನಿ, ಶ್ರೀಕಾಂತ್ ಭಟ್, ಮಂಜುಳ ಜಯಕರ್, ಶೈಲಜಾ ಶೆಟ್ಟಿ, ಪಾರ್ವತಿ ಎಂ., ವೀಣಾ ಆರ್., ಸತೀಶ್ಚಂದ್ರ, ಕೃಷ್ಣಶೆಟ್ಟಿ, ರವಿರಾಜ್ ಶೆಟ್ಟಿ, ಆರ್. ನಾರಾಯಣ ಶೆಣೈ, ಶಾಂತಪ್ಪ ಮೂಲಂಗಿ ಹಾಗೂ ಪಿಯುಷ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು. ವಯೋನಿವೃತ್ತ ಶಿಕ್ಷಕರಿಗೂ ಗೌರವ ಸಲ್ಲಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಎಡಿಸಿ ಅಬೀದ್ ಗದ್ಯಾಳ್, ಎಸ್.ಎಸ್. ಕಾದ್ರೋಳ್ಳಿ, ಡಾ. ಅಶೋಕ್ ಕಾಮತ್, ಶಾಲಿನಿ ಜಿ. ಶಂಕರ್, ಆನಂದ್ ಸಿ. ಕುಂದರ್ ಸೇರಿದಂತೆ ಶಿಕ್ಷಕರು ಹಾಗೂ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *