ಶಿಕ್ಷಕರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಉತ್ತಮ ಸಾಧನೆ:ಸಚಿವ ಲಕ್ಷ್ಮಣ ಸವದಿ

ಜಿಲ್ಲಾ ಸುದ್ದಿ ಕಾರವಾರ ಶಿಕ್ಷಣ ಶಿರಸಿ

Spread the love

ಅಂಕೋಲಾ: ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಉತ್ತರ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೂರನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

<

ಅಂಕೋಲಾದ ನಾಡವರ ಸಭಾಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡುವವರಲ್ಲ. ಸಮಾಜ ನಿರ್ಮಾಣದಲ್ಲಿ ಅವರ ಪಾತ್ರ ಮಹತ್ವದ್ದು. ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದಿದ್ದಾರೆ. ದೇಶ ಕಟ್ಟುವಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವುದು ಸರ್ಕಾರಿ ಶಾಲೆಗಳ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಅನುಕೂಲವಾಗುವಂತೆ ಅಂಕೋಲಾದಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಆಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು. ಇದಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ₹1 ಕೋಟಿ ಹಾಗೂ ಉಳಿದ ಮೊತ್ತವನ್ನು ಶಾಸಕರ ಅನುದಾನದ ಮೂಲಕ ಒದಗಿಸಲಾಗುವುದು ಎಂದು ತಿಳಿಸಿದರು.

ಶಾಸಕ ಸತೀಶ್ ಸೈಲ್ ಮಾತನಾಡಿ, ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಅತಿಥಿ ಶಿಕ್ಷಕರಿಗೆ ಕನಿಷ್ಠ ವೇತನ ದೊರೆಯುವಂತೆ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಪಾಂಡುರಂಗ ಕೆ. ಗೌಡ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪ ನಿರ್ದೇಶಕಿ ಲತಾ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಲಲಕ್ಷ್ಮೀ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *