ಗಣೇಶ ಚತುರ್ಥಿ: ಎನ್ ಡಬ್ಲು ಕೆಎಸ್ ಆರ್ ಟಿಸಿ ಯಿಂದ 312 ಹೆಚ್ಚುವರಿ ವಿಶೇಷ ಬಸ್‌

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಕಾರವಾರ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ 312 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

<

ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುವುದು. ವಾರಾಂತ್ಯದ ದಿನಗಳು ಹಾಗೂ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಅಂತರರಾಜ್ಯ ಪ್ರಮುಖ ಸ್ಥಳಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಸೆ. 11ರಿಂದ 13ರವರೆಗೆ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹಬ್ಬ ಮುಗಿದ ಬಳಿಕ ಸೆ. 14 ರಿಂದಲೂ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಸಾರಿಗೆಗಳನ್ನು ಓಡಿಸಲು ಕ್ರಮ ಕೈಗೊಳ್ಳಲಾಗಿದೆ.

ಗಣೇಶ ಚತುರ್ಥಿ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರು ಸಂಸ್ಥೆಯ ಹೆಚ್ಚುವರಿ ವಿಶೇಷ ಬಸ್‌ಗಳ ಸದುಪಯೋಗ ಪಡೆದುಕೊಳ್ಳಬೇಕು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲೇ ಪ್ರಯಾಣಿಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

What do you feel about this post?

33%
like

Like

67%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *