ಪದ್ಮರಾಜ್ ಪೂಜಾರಿ ಹೆಗಲಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಾರಥ್ಯ: ಕೈ ಪಾಳೆಯದಲ್ಲಿ ಹೊಸ ಹುರುಪು

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಆದೇಶ ಹೊರಡಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಮಾಡಲಾಗಿದೆ.

ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಜಿಲ್ಲೆಯ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿದ್ದರು. ಪಕ್ಷದ ಸಂಘಟನೆ, ಕಾರ್ಯಚಟುವಟಿಕೆಗಳು ಹಾಗೂ ಮುಂದಿನ ದಿನಗಳಲ್ಲಿ ಸಂಘಟನೆ ಬಲಪಡಿಸುವ ಕುರಿತು ಅಭಿಪ್ರಾಯ ಸಂಗ್ರಹಿಸಿ, ಸಮಗ್ರ ವರದಿಯನ್ನು ಎಐಸಿಸಿಗೆ ಸಲ್ಲಿಸಿದ್ದರು.

ವೀಕ್ಷಕರ ವರದಿ ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ನಡೆದ ಚರ್ಚೆಯ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಎಐಸಿಸಿ ಅನುಮೋದನೆ ನೀಡಿದೆ.

ಪದ್ಮರಾಜ್ ಆರ್. ಪೂಜಾರಿ ಅವರ ನೇಮಕದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *