ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ನಟ ಅನಂತ್ ನಾಗ್ ಆಯ್ಕೆ:ಸೆ.22 ರಂದು ರಾಷ್ಟ್ರಪತಿಗಳಿಂದ ಪ್ರದಾನ

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ದೇಶ ವಿದೇಶ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ ಸಿನಿಮಾ

Spread the love

ಬೆಂಗಳೂರು: ಐದು ದಶಕಗಳಿಗೂ ಹೆಚ್ಚು ಕಾಲ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದ ಹಿರಿಯ ನಟ ಅನಂತ್ ನಾಗ್ ಅವರಿಗೆ ದೇಶದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದುಬಂದಿದೆ.

<

ಭಾರತೀಯ ಚಿತ್ರರಂಗಕ್ಕೆ ನೀಡಿರುವ ಸುದೀರ್ಘ ಕೊಡುಗೆಯನ್ನು ಪರಿಗಣಿಸಿ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.

ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕತಾ ನಗರ, ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

1948ರ ಸೆಪ್ಟೆಂಬರ್ 4ರಂದು ಜನಿಸಿದ ಅನಂತ್ ನಾಗ್, ಕನ್ನಡ ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಐದು ದಶಕಗಳಿಗೂ ಹೆಚ್ಚಿನ ಕಲಾ ಪಯಣದಲ್ಲಿ 300ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿರುವ ಅವರು, 250ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು, ಮರಾಠಿ, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಯ ಚಿತ್ರಗಳಲ್ಲಿಯೂ ಅವರು ಅಭಿನಯಿಸಿದ್ದಾರೆ.

ಅನಂತ್ ನಾಗ್ ಅವರ ಕಲಾ ಸೇವೆಗೆ ಈಗಾಗಲೇ ಐದು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸಂದಿವೆ. 2025ರಲ್ಲಿ ಭಾರತ ಸರ್ಕಾರವು ಅವರಿಗೆ ಪದ್ಮಭೂಷಣ ಗೌರವವನ್ನೂ ನೀಡಿತ್ತು.

ಮೋದಿ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿ ಅವರು ಅನಂತ್ ನಾಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಅವರ ವೈವಿಧ್ಯಮಯ ಅಭಿನಯ ಹಾಗೂ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *