ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಗೌರವ: ಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

ದೇಶ ವಿದೇಶ ಮಹಾನಗರ ರಾಜ್ಯ ಸಿನಿಮಾ

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಅಪ್ರತಿಮ ಕಲಾವಿದ ಹಾಗೂ ಬಹುಮುಖ ಪ್ರತಿಭೆ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಅವರು ಭಾಜನರಾಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕನ್ನಡದ ಜತೆಗೆ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಅನಂತ್ ನಾಗ್ ಅವರ ಕಲಾಸೇವೆ ಅಪಾರ. ಭಾರತೀಯ ಸಿನಿರಂಗಕ್ಕೆ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಕೇಂದ್ರ ಸರ್ಕಾರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸುವ ಮೂಲಕ ಈ ಅಭಿಜಾತ ಕಲಾವಿದನಿಗೆ ಗೌರವ ಸಲ್ಲಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅನಂತ್ ನಾಗ್ ಅವರ ಅಭಿನಯ, ಕಲಾ ಪಯಣ ಹಾಗೂ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಮುಂದಿನ ಪೀಳಿಗೆಗೂ ಸ್ಫೂರ್ತಿಯಾಗಲಿ ಎಂದು ಮುಖ್ಯಮಂತ್ರಿ ಹಾರೈಸಿದ್ದಾರೆ.

ನಾಡಿನ ಜನತೆಯ ಪರವಾಗಿ ಅನಂತ್ ನಾಗ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *