ಹೋಬಳಿ ಮಟ್ಟದಲ್ಲೇ ಜನರ ಅಹವಾಲು ಆಲಿಕೆ, ಉತ್ತರ ಕನ್ನಡದಲ್ಲಿ ಪ್ರಜಾಸೇವೆ ಆಂದೋಲನ: ಡಿಸಿ ಲಕ್ಷ್ಮಿಪ್ರೀಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಜನರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಸ್ಪಂದಿಸಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

<

ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗಳಲ್ಲಿ ತಾಲೂಕು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಸಲ್ಲಿಸಬಹುದಾಗಿದೆ. ಅಲ್ಲದೆ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲೆಲ್ಲಿ ಸಭೆ?

ಶಿರಸಿ ತಾಲೂಕು: ಹುಲೇಕಲ್ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಹೊನ್ನಾವರ ತಾಲೂಕು: ಮಾವಿನಕುರ್ವಾ ಗ್ರಾಮದ ನವದುರ್ಗಾ ದೇವಸ್ಥಾನದ ಸಭಾಭವನದಲ್ಲಿ ಭಟ್ಕಳ–ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ಉಪಾಧ್ಯಕ್ಷ ಮಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಅಂಕೋಲಾ ತಾಲೂಕು: ಅವರ್ಸಾ ಗ್ರಾಮದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬೆಲೇಕೇರಿ ಹೋಬಳಿ ಮಟ್ಟದ ಸಭೆ ನಡೆಯಲಿದ್ದು, ಕಾರವಾರ–ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಯಲ್ಲಾಪುರ ತಾಲೂಕು: ಕಣ್ಣಿಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಯಲ್ಲಾಪುರ ಹೋಬಳಿ ಮಟ್ಟದ ಸಭೆ ನಡೆಯಲಿದ್ದು, ಯಲ್ಲಾಪುರ–ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *