ರಾಜ್ಯದಾದ್ಯಂತ ಟಾಸ್ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿ: ನಳಿನ್ ಕುಮಾರ್ ಕಟೀಲ್

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ ಸಿನಿಮಾ

Spread the love

ಮಂಗಳೂರು: ಬಹುನಿರೀಕ್ಷಿತ ತುಳು ಸಿನಿಮಾ ‘ಟಾಸ್’ ರಾಜ್ಯಾದ್ಯಂತ ತೆರೆಕಂಡಿದ್ದು, ಮಂಗಳೂರಿನ ಬಿಗ್ ಸಿನೆಮಾಸ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸುವ ಮೂಲಕ ಚಿತ್ರ ಬಿಡುಗಡೆಗೆ ಚಾಲನೆ ನೀಡಿದರು.

<

ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಚಿತ್ರಕ್ಕೆ ಅರ್ಜುನ್ ದೇವ್ ನಿರ್ದೇಶನದ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ.

ಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್,“ಇಂದು ಎರಡು ವಿಶೇಷ ದಿನ. ಒಂದೆಡೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ, ಮತ್ತೊಂದೆಡೆ ತುಳು ಭಾಷೆಯ ಬಹುನಿರೀಕ್ಷಿತ ‘ಟಾಸ್’ ಸಿನಿಮಾ ಬಿಡುಗಡೆಯಾಗುತ್ತಿದೆ. ಡಾ. ದೇವದಾಸ್ ಕಾಪಿಕಾಡ್ ಅವರು ನಮಗೆಲ್ಲ ಹೀರೋ ಇದ್ದಂತೆ. ಅವರು ಮುಟ್ಟಿದ್ದೆಲ್ಲ ಬಂಗಾರವಾಗುತ್ತದೆ. ‘ಟಾಸ್’ ಕೂಡ ‘ಕಾಂತಾರ’ದಂತೆ ಯಶಸ್ಸು ಕಾಣಲಿ” ದು ಹಾರೈಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ರಂಗಭೂಮಿಯ ಹಿರಿಯ ಕಲಾವಿದ ಡಾ. ದೇವದಾಸ್ ಕಾಪಿಕಾಡ್ ಅವರ ‘ಟಾಸ್’ ಸಿನಿಮಾ ಬಿಡುಗಡೆಯಾಗುತ್ತಿರುವುದು ಸಂತಸದ ವಿಚಾರ. ತುಳುವರೆಲ್ಲರೂ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸಿದರೆ ಉತ್ತಮ ಚಿತ್ರವೊಂದು ಗೆಲುವು ಸಾಧಿಸಲಿದೆ ಎಂದರು.

ಖ್ಯಾತ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ಮಾತನಾಡಿ,‘ಟಾಸ್’ ಸಿನಿಮಾ ಕಾಪಿಕಾಡ್ ಅವರಿಗೆ ‘ಕಾಸ್’ ಮಾಡಿಕೊಡಲಿ. ತುಳುವರಿಗೆ ಹಾಗೂ ಸಮಸ್ತ ತುಳುನಾಡಿಗೆ ಈ ಸಿನಿಮಾ ಹೆಸರು ತಂದುಕೊಡಲಿ. ಅರ್ಜುನ್ ದೇವ್ ಅವರ ನಟನೆ ಮತ್ತು ನಿರ್ದೇಶನದ ಈ ಚಿತ್ರ ಕನ್ನಡ ಹಾಗೂ ತುಳು ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದು ಹೆಮ್ಮೆಯ ವಿಚಾರ” ಎಂದರು.

ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ಚಿತ್ರದ ಪ್ರದರ್ಶನ ವೀಕ್ಷಿಸಿದವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಸಿನಿಮಾ ಉತ್ತಮ ಹೆಸರು ಮಾಡಲಿ ಎಂದು ಶುಭ ಹಾರೈಸಿದರು.

ಡಾ. ಶಿವಶರಣ್ ಶೆಟ್ಟಿ ಮಾತನಾಡಿ, ಅರ್ಜುನ್ ಕಾಪಿಕಾಡ್ ಅವರು ಚಿತ್ರಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ. ಅವರಿಗೆ ಯಶಸ್ಸು ದೊರೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಡಾ. ದೇವದಾಸ್ ಕಾಪಿಕಾಡ್, ಕದ್ರಿ ಮಣಿಕಾಂತ್, ಭೋಜರಾಜ ವಾಮಂಜೂರು, ಶರ್ಮಿಳಾ ಡಿ. ಕಾಪಿಕಾಡ್, ವೀರೇಂದ್ರ ಶೆಟ್ಟಿ ಕಾವೂರು, ಗಿರೀಶ್ ಎಂ. ಶೆಟ್ಟಿ ಕಟೀಲು, ಪ್ರಕಾಶ್ ತೂಮಿನಾಡ್, ಪುಷ್ಪರಾಜ ಬೊಳ್ಳಾರ್, ಕಿಶೋರ್ ಕೊಟ್ಡಾರಿ, ರಾಕೇಶ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಮುಖೇಶ್ ಹೆಗ್ಡೆ, ಚಂದ್ರಹಾಸ ಶೆಟ್ಟಿ ರಂಗೋಲಿ, ಬಾಳ ಜಗನ್ನಾಥ ಶೆಟ್ಟಿ, ದಿನೇಶ್ ಶೆಟ್ಟಿ, ಫಯಾಜ್ ಅಬ್ದುಲ್ ರಝಾಕ್ ದುಬಾಯಿ, ಇಝಾಕ್ ಚೈತ್ರ ಶೆಟ್ಟಿ, ಸದಾಶಿವ ಅಮೀನ್, ಜೋಯಲ್ ಡಿ. ಸೋಜ, ರೋಶನ್ ಶೆಟ್ಟಿ, ಚೈತ್ರಾ ಶೆಟ್ಟಿ, ಶೈಲಶ್ರೀ ಮುಲ್ಕಿ ಮತ್ತಿತರರು ಉಪಸ್ಥಿತರಿದ್ದರು. ಜಿತೇಶ್ ಉಳಿಯ ನಿರ್ವಹಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *