ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಗೆ ಗಣ್ಯರ ಭೇಟಿ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈ ಅವರು, ದೇವರ ದಯೆ ಹಾಗೂ ಜನರ ಪ್ರಾರ್ಥನೆಯಿಂದ ಆರೋಗ್ಯವಾಗಿದ್ದೇನೆ ಎಂದು ಆಸ್ಪತ್ರೆಯಿಂದಲೇ ತಿಳಿಸಿದ್ದಾರೆ.

<

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸೋಮವಾರ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ರಮಾನಾಥ ರೈ ಹಾಗೂ ಅಪಘಾತದಲ್ಲಿ ಗಾಯಗೊಂಡಿರುವ ಅವರ ಆಪ್ತ ಸಹಾಯಕ ಡೆಂಜಿಲ್ ಮತ್ತು ಕಾರು ಚಾಲಕರ ಆರೋಗ್ಯ ವಿಚಾರಿಸಿದರು.

ಶ್ರೀಧಾಮ ಮಾಣಿಲ ಕ್ಷೇತ್ರದ ಮೋಹನದಾಸ್ ಸ್ವಾಮೀಜಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಸೇರಿದಂತೆ ಹಲವರು ಆಸ್ಪತ್ರೆಗೆ ತೆರಳಿ ಗಾಯಾಳುಗಳ ಶೀಘ್ರ ಗುಣಮುಖತೆಗೆ ಹಾರೈಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರೂ ಆಸ್ಪತ್ರೆಗೆ ಭೇಟಿ ನೀಡಿ ರಮಾನಾಥ ರೈ ಹಾಗೂ ಇತರ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಸಿಎಂ, ಕೆಪಿಸಿಸಿ ಅಧ್ಯಕ್ಷರಿಂದ ದೂರವಾಣಿ ಕರೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸೋಮವಾರ ರಮಾನಾಥ ರೈ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಬಂಟ್ವಾಳ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರೂ ಆಸ್ಪತ್ರೆಗೆ ಭೇಟಿ ನೀಡಿ ರೈ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

ಖಾಸಗಿ ಬಸ್ ಡಿಕ್ಕಿ

ಭಾನುವಾರ ಸಾಣೂರು ಜಂಕ್ಷನ್‌ನಲ್ಲಿ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *