ಉತ್ತರ ಕನ್ನಡದಲ್ಲಿ ಸೆ.24 ರಂದು ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಿಸಿದ ಡಿಸಿ ಲಕ್ಷ್ಮಿಪ್ರೀಯಾ

ಜಿಲ್ಲಾ ಸುದ್ದಿ ಕಾರವಾರ ಮಳೆ ಸುದ್ದಿ ರಾಜ್ಯ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆ. 24 ರಂದು ಭಾರಿ ಮಳೆ ಜತೆಗೆ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

<

ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತವು ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಸಜ್ಜುಗೊಳಿಸಲಾಗಿದೆ. ಹವಾಮಾನ ಪರಿಸ್ಥಿತಿ ಹಾಗೂ ತುರ್ತು ಮಾಹಿತಿಗಾಗಿ ಜಿಲ್ಲಾಡಳಿತದ ಸಾಮಾಜಿಕ ಜಾಲತಾಣಗಳು ಮತ್ತು ಸ್ಥಳೀಯ ಮಾಧ್ಯಮಗಳ ಮೂಲಕ ಮಾಹಿತಿ ಪಡೆಯುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಕೆರೆ, ಸಮುದ್ರ ಸೇರಿದಂತೆ ನೀರಿನ ಪ್ರದೇಶಗಳಿಗೆ ತೆರಳುವುದು ಮತ್ತು ನೀರಿಗೆ ಇಳಿಯುವುದನ್ನು ತಪ್ಪಿಸಬೇಕು. ಮಕ್ಕಳು ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಪಾಲಕರು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.‌

ಸಿಡಿಲಿನ ವೇಳೆ ಎಚ್ಚರಿಕೆ

ಮಳೆ ಹಾಗೂ ಸಿಡಿಲಿನ ಸಂದರ್ಭದಲ್ಲಿ ಕೃಷಿಕರು ಕೃಷಿ ಚಟುವಟಿಕೆಗಳಿಂದ ದೂರವಿದ್ದು ಸುರಕ್ಷಿತ ಸ್ಥಳದಲ್ಲಿರುವಂತೆ ಸೂಚಿಸಲಾಗಿದೆ. ಮಳೆಯ ವೇಳೆ ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಅನಗತ್ಯವಾಗಿ ಹೊರಗೆ ಸಂಚರಿಸದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು ಹಾಗೂ ತುಂಡಾದ ವಿದ್ಯುತ್ ತಂತಿಗಳ ಸಮೀಪ ತೆರಳದಂತೆ ಎಚ್ಚರಿಕೆ ವಹಿಸಬೇಕು. ಹಳೆಯ ಹಾಗೂ ದುರ್ಬಲ ಕಟ್ಟಡಗಳು ಮತ್ತು ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು ಎಂದರು.

ಶಿಥಿಲಾವಸ್ಥೆಯಲ್ಲಿರುವ ಮನೆ ಅಥವಾ ಕಾಂಪೌಂಡ್ ಗೋಡೆಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕಾಲುವೆ, ಸಂಕ ಹಾಗೂ ಕಿರುಸೇತುವೆಗಳನ್ನು ದಾಟುವಾಗ ನೀರಿನ ಪ್ರಮಾಣ ಗಮನಿಸಿ ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಿದ್ದಾರೆ.

ತುರ್ತು ಸಂಪರ್ಕ

ತುರ್ತು ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಮ್‌ನ 08382–229857 ಸಂಖ್ಯೆಗೆ ಅಥವಾ ವಾಟ್ಸ್‌ಆ್ಯಪ್ ಮೂಲಕ 9483511015 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *