ಶಾಲೆ,ಅಂಗನವಾಡಿ, ಆಸ್ಪತ್ರೆಗೆ ನೀರು ಪೂರೈಕೆ ಕಾಮಗಾರಿಗೆ ಆದ್ಯತೆ ನೀಡಿ: ಸಿಇಒ ಡಾ.ದಿಲೀಷ್ ಶಶಿ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಡಿವ ನೀರಿನ ಅಭಾವ ಕಂಡು ಬರುವ ಅಂಗನವಾಡಿ, ಶಾಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀರು ಒದಗಿಸುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‌ಗಳಿಗೆ ಜಿಲ್ಲಾ ಪಂಚಾಯತ ಸಿಇಒ ಡಾ.ದಿಲೀಷ್ ಶಶಿ ಅವರು ನಿರ್ದೇಶನ ನೀಡಿದರು.

<

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಯಾವುದೇ ಅಂಗನವಾಡಿ,ಶಾಲೆ ಮತ್ತು ಆಸ್ಪತ್ರೆಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳ ಅಗತ್ಯತೆ ಕುರಿತಂತೆ ಸಂಬಂದಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯವಿರುವ ಕಾಮಗಾರಿಗಳನ್ನು ಕ್ರಿಯಾಯೋಜನೆಯಲ್ಲಿ ಸೇರ್ಪಡೆ ಮಾಡಿ ಜಿಲ್ಲಾ ಪಂಚಾಯತ್ ಗೆ ಸಲ್ಲಿಸುವಂತೆ ತಿಳಿಸಿದ ಅವರು ಈ ಯೋಜನೆಗಳಿಗೆ ಕೂಡಲೇ ಅನುಮೋದನೆ ನೀಡಲಾಗುವುದು ಎಂದರು.

ಬೋರ್‌ವೆಲ್ ಗಳನ್ನು ಕೊರೆಯುವುದು ಮಾತ್ರವಲ್ಲದೇ ಅವುಗಳಿಗೆ ಅಗತ್ಯವಿರುವ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿ, ಬೋರ್ ವೆಲ್ ನಿಂದ ಸಾರ್ವಜನಿಕರಿಗೆ ನೀರು ದೊರೆಯುವಂತೆ ಮಾಡಿದಲ್ಲಿ ಮಾತ್ರ ಯೋಜನೆಯ ಸಮಗ್ರ ಉದ್ದೇಶ ಪೂರ್ಣಗೊಳ್ಳುತ್ತದೆ, ಕ್ರಿಯಾ ಯೋಜನೆ ರೂಪಿಸುವಾಗ ಈ ಎಲ್ಲಾ ಮೊತ್ತವನ್ನು ಸೇರಿಸಿ ಯೋಜನೆ ತಯಾರಿಸುವಂತೆ ತಿಳಿಸಿದರು.

ಪ್ರಸಕ್ರ ವರ್ಷ ಮಳೆಯ ಪ್ರಮಾಣ ಕಡಿಮೆಯಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಕಂಡುಬರುವ ಸಾಧ್ಯತೆಗಳಿದ್ದು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಮತ್ತು ಪಂಚಾಯತ್ ಗಳ ಪಿಡಿಓ ಗಳ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಹರ್ ಘರ್ ಜಲ್ ಹಾಗೂ ಸುಜಲ್ ಗಾವ್ ಯೋಜನೆಯಡಿ ಗ್ರಾಮ ಪಂಚಾಯತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ದತ್ತಾಂಶವನ್ನು ನಿಖರವಾಗಿ ಪೋರ್ಟ್ಲ್‌ನಲ್ಲಿ ನಮೂದಿಸಬೇಕು. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವು ಈ ಪೋರ್ಟಲ್ ಪ್ರಗತಿ ಆಧಾರ ಮೇಲೆ ನಿರ್ಧಾರವಾಗುತ್ತದೆ ಹೀಗಾಗಿ ದತ್ತಾಂಶವನ್ನು ನಿಖರವಾಗಿ ನಮೂದಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿರುವ ನೀರು ಶುದ್ಧೀಕರಣ ಘಟಕಗಳ ದುರಸ್ತಿಗೆ ಅನುದಾನವನ್ನು ಬಿಡುಗಡೆಗೊಳಿಸಲಾಗುತ್ತಿದ್ದು, ಅಗತ್ಯವಿರುವೆಡೆಗಳಲ್ಲಿ ಯಂತ್ರಗಳನ್ನು ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಲಜೀವನ್ ಮಿಷನ್ ಮತ್ತು ಹರ ಘರ್ ಜಲ್ ಯೋಜನೆಯ ಪ್ರಗತಿ ಕುರಿತಂತೆ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಬಕಷ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *