ದ.ಕ ಕಾಂಗ್ರೆಸ್ ಸಾರಥಿ ಪದ್ಮರಾಜ್ ಪೂಜಾರಿ ಪದಗ್ರಹಣಕ್ಕೆ ಜನಾರ್ದನ ಪೂಜಾರಿ ಎಂಟ್ರಿ, ಕಾರ್ಯಕರ್ತರ ಸಂಭ್ರಮ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣಗೊಂಡು ಒಂಬತ್ತು ವರ್ಷ ಕಳೆದರೂ ಅಲ್ಲಿಗೆ ಭೇಟಿ ನೀಡದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಗುರುವಾರ ನೂತನ ಡಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ತಮ್ಮ ಪಟ್ಟಶಿಷ್ಯ ಪದ್ಮರಾಜ್ ಆರ್. ಪೂಜಾರಿ ಅವರನ್ನು ಆಶೀರ್ವದಿಸಲು ಕಚೇರಿಗೆ ಬಂದಿದ್ದರು.

<

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಅವರ ಉಪಸ್ಥಿತಿ ಪಕ್ಷದ ವಲಯದಲ್ಲಿ ಗಮನ ಸೆಳೆಯಿತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಹಲವು ವರ್ಷಗಳಿಂದ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದ ಅವರು, ಶಿಷ್ಯನ ಆಹ್ವಾನದ ಮೇರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನೂತನ ಡಿಸಿಸಿ ಕಚೇರಿ ಉದ್ಘಾಟನೆ ಸೇರಿದಂತೆ ಪಕ್ಷದ ಹಲವು ಪ್ರಮುಖ ಕಾರ್ಯಕ್ರಮಗಳಿಂದ ಅವರು ದೂರ ಉಳಿದಿದ್ದರು. ಆರೋಗ್ಯದ ಕಾರಣದಿಂದಾಗಿ ಅವರು ರಾಜಕೀಯ ಚಟುವಟಿಕೆಗಳಿಂದ ದೂರವಿದ್ದಾರೆ ಎಂದು ಕಾರ್ಯಕರ್ತರು ಭಾವಿಸಿದ್ದರು. ಇದೀಗ ಶಿಷ್ಯನ ಪದಗ್ರಹಣಕ್ಕೆ ಆಗಮಿಸಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಮಾಜಿ ಶಾಸಕ ಜೆ.ಆರ್. ಲೋಬೊ ಮಾತನಾಡಿ, ಪದ್ಮರಾಜ್ ಪೂಜಾರಿ ತಮ್ಮ ಆಪ್ತ ಶಿಷ್ಯರಾಗಿರುವ ಕಾರಣ ಅವರ ವಿಶೇಷ ಆಹ್ವಾನ ಹಾಗೂ ಗೌರವದ ಮೇರೆಗೆ ಜನಾರ್ದನ ಪೂಜಾರಿ ಕಾರ್ಯಕ್ರಮಕ್ಕೆ ಬಂದಿದ್ದಾರೆ. ರಾಜಕೀಯ ಕಾರಣಕ್ಕಿಂತ ಶಿಷ್ಯನ ಮೇಲಿನ ಅಭಿಮಾನವೇ ಇದಕ್ಕೆ ಮುಖ್ಯ ಕಾರಣ ಎಂದು ಹೇಳಿದರು.

ಬೂತ್ ಮಟ್ಟದಿಂದ ಸಂಘಟನೆ

ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಟ್ಟಕಡೆಯ ಕಾರ್ಯಕರ್ತನಿಗೂ ಗೌರವ ನೀಡಿ, ಅವರಿಗೆ ಶಕ್ತಿ ತುಂಬುವ ಮೂಲಕ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಲು ಆದ್ಯತೆ ನೀಡಲಾಗುವುದು ಎಂದರು.

ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ಕಾರ್ಯಕರ್ತರ ಬೆಂಬಲದೊಂದಿಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಿ, ಪಕ್ಷದ ಗತವೈಭವ ಮರುಕಳಿಸುವಂತೆ ಶ್ರಮಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್,ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಹಲವರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *