ಬೆಂಗಳೂರು: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರಕಾರ ಎಸ್ಐಟಿ ರಚಿಸಿದ್ದು, ಪೊಲೀಸ್ ಮಹಾ ನಿರೀಕ್ಷಕ ಎನ್. ಶಶಿಕುಮಾರ್ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.
ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಸಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ ತಂಡದ ಸದಸ್ಯರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%







