ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ನಿಗಾ: ಡಿಎಚ್ ಒ ಡಾ. ತಿಮ್ಮಯ್ಯ

ಆರೋಗ್ಯ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು

Spread the love

ಮಂಗಳೂರು: ಗರ್ಭಿಣಿಯರ ಆರೋಗ್ಯದ ಸಮರ್ಪಕ ಮೇಲ್ವಿಚಾರಣೆ ಹಾಗೂ ಅಗತ್ಯ ಆರೋಗ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸಲು ತಾಯಿ ಕಾರ್ಡ್ ಪ್ರಮುಖ ದಾಖಲೆಯಾಗಿದ್ದು, ಪ್ರತಿಯೊಬ್ಬ ಗರ್ಭಿಣಿಯೂ ಕಡ್ಡಾಯವಾಗಿ ತಾಯಿ ಕಾರ್ಡ್ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ಸೂಚಿಸಿದರು.

<

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಜನನ ಪೂರ್ವ ಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯ್ದೆ–1994ಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಗರ್ಭಿಣಿಯರು ಸ್ಕ್ಯಾನಿಂಗ್‌ಗಾಗಿ ಕೇಂದ್ರಗಳಿಗೆ ತೆರಳುವಾಗ ತಾಯಿ ಕಾರ್ಡ್‌ನ್ನು ತಪ್ಪದೇ ಕೊಂಡೊಯ್ಯಬೇಕು. ತಾಯಿ ಕಾರ್ಡ್ ಇಲ್ಲದಿದ್ದಲ್ಲಿ ಸಮೀಪದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಅಥವಾ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರನ್ನು ಸಂಪರ್ಕಿಸಿ ಕಾರ್ಡ್ ಪಡೆಯುವಂತೆ ತಿಳಿಸಿದರು.

ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ನಿಗಾ

ಜಿಲ್ಲೆಯ ಸ್ಕ್ಯಾನಿಂಗ್ ಕೇಂದ್ರಗಳಿಗೆ ಅಧಿಕಾರಿಗಳು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ನಿಯಮಗಳನ್ನು ಸ್ಕ್ಯಾನಿಂಗ್ ಸಂಸ್ಥೆಗಳು ಸಮರ್ಪಕವಾಗಿ ಪಾಲಿಸುತ್ತಿವೆಯೇ ಎಂಬುದನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಕಾಯ್ದೆಯ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಅಧ್ಯಕ್ಷೆ (ಪಿ.ಎನ್.ಡಿ.ಟಿ) ಡಾ. ಅಮೃತಾ ಭಂಡಾರಿ, ಜಿಲ್ಲಾ ತಪಾಸಣೆ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯೆ ಡಾ. ಸುಂದರಿ ಸೇರಿದಂತೆ ಇತರ ಸದಸ್ಯರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *