ವಿಶ್ವಕರ್ಮರ ಕಲಾ ನೈಪುಣ್ಯತೆ ವಿಶ್ವಕ್ಕೇ ಶ್ರೇಷ್ಠ: ಸಂಸದ ಬ್ರಿಜೇಶ್ ಚೌಟ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ವಿಶ್ವಕರ್ಮ ಸಮುದಾಯದ ಕಲೆ ಹಾಗೂ ಕೌಶಲಕ್ಕೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಇದೆ. ಪಂಚ ಕಸುಬುಗಳಲ್ಲಿ ಯಾವುದೇ ಕೆಲಸವನ್ನು ವಹಿಸಿದರೂ ಅದಕ್ಕೆ ಅತ್ಯಂತ ಸುಂದರ ರೂಪ ನೀಡುವ ಕಲಾ ನೈಪುಣ್ಯತೆ ವಿಶ್ವಕರ್ಮ ಸಮುದಾಯಕ್ಕೆ ರಕ್ತಗತವಾಗಿ ಬಂದಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.

<

ನಗರದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಕಾಳಿಕಾಂಬಾ ಕಲಾರಂಗ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವಕರ್ಮ ಸಮುದಾಯದ ಕಲೆ, ಕೌಶಲ ಹಾಗೂ ಪರಂಪರೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆಗೆ ಮಹತ್ವದ ಕೊಡುಗೆ ನೀಡಿದೆ. ತಲೆತಲಾಂತರಗಳಿಂದ ಬಂದಿರುವ ಈ ಕೌಶಲವನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಲೇಖಕ ಉದಯಭಾಸ್ಕರ್ ಆಚಾರ್ಯ ಸುಳ್ಯ ಅವರು ಭಗವಾನ್ ಶ್ರೀ ವಿಶ್ವಕರ್ಮ ಹಾಗೂ ವಿಶ್ವಬ್ರಾಹ್ಮಣ ಸಮಾಜದ ಪರಂಪರೆ ಕುರಿತು ಉಪನ್ಯಾಸ ನೀಡಿದರು. ವಿಶ್ವಕರ್ಮ ಸಮುದಾಯದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವೃತ್ತಿಪರ ಪರಂಪರೆಯ ಕುರಿತು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ ಪಾಂಡೇಶ್ವರ ಮತ್ತಿತರರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಚೇತನ್ ಕುಮಾರ್ ಹಾಗೂ ಅಖಿಲೇಶ್ ಶರ್ಮಾ ವೇದಮಂತ್ರ ಪಠಿಸಿದರು. ಪಿ. ರವೀಂದ್ರ ಮಂಗಳಾದೇವಿ ನಿರೂಪಿಸಿದರು.

ಬಳಿಕ ವಿಶ್ವಬ್ರಾಹ್ಮಣ ಮಹಿಳಾ ಸಮಿತಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *