ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳಕ್ಕೆ ಚಾಲನೆ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಸುರತ್ಕಲ್: ರೈತರು, ಗ್ರಾಹಕರು ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಉದ್ದೇಶದಿಂದ ಸುರತ್ಕಲ್ ಬಂಟರ ಭವನದಲ್ಲಿ ಪ್ರಥಮ ಬಾರಿಗೆ ಆಯೋಜಿಸಿರುವ ಸಸ್ಯೋತ್ಸವ, ಆಹಾರ ಮೇಳ ಹಾಗೂ ಹೋಳಿಗೆ ಹಬ್ಬಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

<

ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ಬಂಟರ ಸಂಘ ಸುರತ್ಕಲ್ ಹಾಗೂ ಲಯನ್ಸ್ ಕ್ಲಬ್ ಸುರತ್ಕಲ್ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಸುಭಾಷಿತನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಬಂಟರ ಭವನದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಸಸ್ಯೋತ್ಸವ ಹಾಗೂ ಆಹಾರ ಮೇಳಕ್ಕೆ ಸಾರ್ವಜನಿಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅವರು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಬಟ್ಟೆಬರೆ, ಹೂವು, ತರಕಾರಿ, ವಿವಿಧ ಸಸ್ಯಗಳು, ತಿಂಡಿ–ತಿನಿಸು ಹಾಗೂ ಹಲವು ಬಗೆಯ ಆಹಾರ ಪದಾರ್ಥಗಳು ಲಭ್ಯವಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಮಾತನಾಡಿ, ರೈತ ಕುಡ್ಲ ಪ್ರತಿಷ್ಠಾನ ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು, ಇದರ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದರು.

ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುರತ್ಕಲ್ ಅಧ್ಯಕ್ಷ ಜಯೇಶ್ ಗೋವಿಂದ್, ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜಾ ಟಿ. ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆಪದ್ಭಾಂಧವ ಸಂಘಟನೆಯ ಉಮೇಶ್ ಇಡ್ಯಾ, ರೈತ ಕುಡ್ಲ ಪ್ರತಿಷ್ಠಾನದ ಕಾರ್ಯದರ್ಶಿ ಲತೀಶ್ ಮಳಲಿ ಇದ್ದರು.

ಬಂಟರ ಸಂಘದ ಕೃಷಿ ಸಮಿತಿ ಸಂಚಾಲಕ ಸುಧಾಕರ ಶೆಟ್ಟಿ ಖಂಡಿಗೆ ಅವರನ್ನು ಸನ್ಮಾನಿಸಲಾಯಿತು. ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ರಾಜೇಶ್ವರಿ ಡಿ. ಶೆಟ್ಟಿ ನಿರೂಪಿಸಿದರು. ಲಯನ್ ರಾಜಯ್ಯ ವಂದಿಸಿದರು.

ಕೋಟ್

ಜನಾಕರ್ಷಣೆಯ ಕೇಂದ್ರ ಗ್ರಾಮೀಣ ಪ್ರದೇಶದ ತಿಂಡಿ ತಿನಸು, ರೈತೋಪಯೋಗಿ ಉಪಕರಣ, ವಿವಿಧ ತಳಿಯ ಸಸ್ಯ ಇದು ನಗರ, ಗ್ರಾಮಾಂತರ ಪ್ರದೇಶದ ಜನತೆಗೆ ವರದಾನ.

ಜಗನ್ನಾಥ ಶೆಟ್ಟಿ ಬಾಳ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *