ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಇಂದು (ಸೆ.26) ಬೆಳಿಗ್ಗೆ 10.30ಕ್ಕೆ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗಿದೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ
ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರವಾರ ತಾಲ್ಲೂಕಿನ ಕಿನ್ನರ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪಾಲ್ಗೊಳ್ಳುವಿಕೆಯಲ್ಲಿ ಸಭೆ ನಡೆಯಲಿದೆ.
ಇದೇ ವೇಳೆ ಉಪ ವಿಭಾಗಾಧಿಕಾರಿ, ತಹಶೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಿದ್ದಾಪುರ ತಾಲ್ಲೂಕಿನ ನೀಲಕುಂದು, ಭಟ್ಕಳ ತಾಲ್ಲೂಕಿನ ಮಾರುಕೇರಿ, ಮುಂಡಗೋಡ ತಾಲ್ಲೂಕಿನ ಮೈನಳ್ಳಿ, ಕುಮಟಾ ತಾಲ್ಲೂಕಿನ ಮಿರ್ಜಾನ ಹಾಗೂ ಜೋಯಿಡಾ ತಾಲ್ಲೂಕಿನ ರಾಮನಗರ ಗ್ರಾಮ ಪಂಚಾಯಿತಿಗಳಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
‘ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಹಾಗೂ ಕುಂದುಕೊರತೆಗಳನ್ನು ಸಲ್ಲಿಸಬೇಕು. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಮ್ಮ ಸಮಸ್ಯೆಗಳನ್ನು ತಂದು, ಸೂಕ್ತ ಪರಿಹಾರ ಕಂಡುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad







