ಎಂಆರ್‌ಪಿಎಲ್ ಸ್ಫೋಟ, ಉನ್ನತ ಮಟ್ಟದ ತನಿಖೆ, ಸಂತ್ರಸ್ತರಿಗೆ ಪರಿಹಾರಕ್ಕೆ ಕ್ರಮ: ಸಚಿವ ಯು.ಟಿ. ಖಾದರ್

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ದೇಶ ವಿದೇಶ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟದ ಘಟನೆ ಕುರಿತು ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದು, ಗುರುವಾರ ತನಿಖಾ ಅಧಿಕಾರಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದರು.

ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವುದರ ಜತೆಗೆ ಸಂತ್ರಸ್ತರ ಅಹವಾಲು ಆಲಿಸಿ ಅವರಿಗೆ ಸಾಂತ್ವನ ಹೇಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪ್ರವಾಸವನ್ನು ತುರ್ತಾಗಿ ಮೊಟಕುಗೊಳಿಸಿ ಮಂಗಳೂರಿಗೆ ಆಗಮಿಸಿರುವುದಾಗಿ ಎಂದು ತಿಳಿಸಿದರು.

ಸಂತ್ರಸ್ತರೊಂದಿಗೆ ಮಾತನಾಡಬೇಕಿತ್ತು

ಸ್ಫೋಟದ ಬಳಿಕ ಎಂಆರ್‌ಪಿಎಲ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಸಂತ್ರಸ್ತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸದಿರುವುದು ಗಮನಕ್ಕೆ ಬಂದಿದೆ. ಇದು ಸರಿಯಾದ ಕ್ರಮವಲ್ಲ. ಘಟನೆಯಲ್ಲಿ ಮೃತಪಟ್ಟ ಯುವಕನ ಕುಟುಂಬದವರು ಹಾಗೂ ಗಾಯಗೊಂಡವರನ್ನು ಸಂಸ್ಥೆಯ ಅಧಿಕಾರಿಗಳು ಭೇಟಿ ಮಾಡಿ ಮಾತನಾಡಬೇಕಿತ್ತು ಎಂದರು.

ಸ್ಫೋಟದಿಂದ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ಕಲ್ಪಿಸುವ ಕುರಿತು ಎಂಆರ್‌ಪಿಎಲ್ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗುವುದು. ಸಂತ್ರಸ್ತರಿಗೆ ಅಗತ್ಯ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮನೆ, ಪ್ರಾರ್ಥನಾ ಕೇಂದ್ರಗಳಿಗೆ ಹಾನಿ

ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಮನೆಗಳು ಹಾಗೂ ಪ್ರಾರ್ಥನಾ ಕೇಂದ್ರಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಹಾನಿಯ ಪ್ರಮಾಣದ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಪರಿಶೀಲನೆ ನಡೆಸಲಾಗುವುದು. ಸ್ಫೋಟದಿಂದ ಉಂಟಾದ ನಷ್ಟಕ್ಕೆ ಎಂಆರ್‌ಪಿಎಲ್ ಸಂಸ್ಥೆಯಿಂದಲೇ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಘಟನೆಯ ಸಂಪೂರ್ಣ ತನಿಖೆ ನಡೆಸಿ ಸ್ಫೋಟಕ್ಕೆ ಕಾರಣ, ಹಾನಿಯ ಪ್ರಮಾಣ ಹಾಗೂ ಮುಂದಿನ ಸುರಕ್ಷತಾ ಕ್ರಮಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *