ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ; ಹೊನ್ನಾವರದಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು ಸಭೆ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಹೊನ್ನಾವರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹೊನ್ನಾವರದ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು ಸಭೆ ನಡೆಯಿತು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಬಳಿಕ ಹೊನ್ನಾವರ ತಹಶೀಲ್ದಾರ್ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸಹಾಯಕ ನಿರ್ದೇಶಕ (ಗ್ರೇಡ್–1) ಜಿ. ಸತೀಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ವಿವರಿಸಿ, ಎಲ್ಲರನ್ನು ಸ್ವಾಗತಿಸಿದರು.

ಸುಮಂಗಲಾ ಭಟ್ಟ ಅವರು ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿದರು. ಸುದೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

ಯುವ ಸಂಸತ್ತು ಕಾರ್ಯಕ್ರಮದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರು, ಕಾರ್ಯದರ್ಶಿಗಳು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯ ಪಾಠಣ್ಕರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ್ ಗೌಡ, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *