ಉ.ಕ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ, ಕಾರವಾರ, ಕುಮಟಾ, ದಾಂಡೇಲಿಗೆ ಹೊಸಬರ ನೇಮಕ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪೊಲೀಸ್‌ ಇಲಾಖೆಯ ಹಲವು ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆ ಮಾಡಲಾಗಿದೆ. ಕಾರವಾರ, ಕುಮಟಾ, ದಾಂಡೇಲಿ ಸೇರಿದಂತೆ ವಿವಿಧ ಪೊಲೀಸ್‌ ಉಪ ವಿಭಾಗ ಮತ್ತು ಠಾಣೆಗಳಲ್ಲಿ ಅಧಿಕಾರಿಗಳ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕಾರವಾರದ ಡಿವೈಎಸ್‌ಪಿ ಆಗಿದ್ದ ಗಿರೀಶ್ ಅವರನ್ನು ಉಡುಪಿಯ ಕರಾವಳಿ ಕಾವಲುಪಡೆಗೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಡಿಸಿಆರ್‌ಇಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಎಸ್. ಲೋಕಾಪುರ ಅವರನ್ನು ಕಾರವಾರ ಡಿವೈಎಸ್‌ಪಿ ಆಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಭಟ್ಕಳ ಡಿವೈಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದ ಗಿರೀಶ್ ಬಿ. ಅವರನ್ನು ಡಿಸಿಆರ್‌ಇಯಿಂದ ದಾಂಡೇಲಿ ಉಪವಿಭಾಗದ ಡಿವೈಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಕುಮಟಾ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಯೋಗೇಶ್ ಕೆ.ಎಂ. ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಕುಸುಮಾಧರ್ ಕೆ. ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಕಾರವಾರ ಗ್ರಾಮೀಣ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಉಳಿವೆಪ್ಪ ಎಚ್. ಸಾತೇನಹಳ್ಳಿ ಅವರನ್ನೂ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಧಾರವಾಡ ಪೊಲೀಸ್‌ ತರಬೇತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್ ಬಸಪ್ಪ ಗೋಕಾಕ್ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ವರ್ಗಾವಣೆ ಮತ್ತು ನಿಯೋಜನೆಯಿಂದ ಜಿಲ್ಲೆಯ ಪೊಲೀಸ್‌ ಇಲಾಖೆಯ ಹಲವು ಪ್ರಮುಖ ಹುದ್ದೆಗಳಲ್ಲಿ ಹೊಸ ಅಧಿಕಾರಿಗಳು ಕರ್ತವ್ಯ ವಹಿಸಿಕೊಳ್ಳಲಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *