ಅ.5ರಿಂದ 10 ರವರೆಗೆ ಕೆಎಂಸಿ ಅತ್ತಾವರ ಆಸ್ಪತ್ರೆಯಲ್ಲಿ ಹಿರಿಯರಿಗೆ ಉಚಿತ ಆರೋಗ್ಯ ಸಮಾಲೋಚನೆ

ಜಿಲ್ಲಾ ಸುದ್ದಿ ಅಂತರ ಜಿಲ್ಲೆ ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಅಂತರ ರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯ ವೃದ್ಧಾಪ್ಯ ಚಿಕಿತ್ಸಾ ವಿಭಾಗದಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅ.5ರಿಂದ 10ರವರೆಗೆ ಒಂದು ವಾರ ಉಚಿತ ಆರೋಗ್ಯ ಸಮಾಲೋಚನಾ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಹಿರಿಯರ ಸಪ್ತಾಹದ ಅಂಗವಾಗಿ ನಡೆಯುವ ಶಿಬಿರವು ಆರೋಗ್ಯಕರ ವೃದ್ಧಾಪ್ಯವನ್ನು ಉತ್ತೇಜಿಸುವುದು, ರೋಗಗಳ ತಡೆಗಟ್ಟುವಿಕೆ ಹಾಗೂ ಹಿರಿಯರ ಸಮಗ್ರ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.

ಅ.5ರಿಂದ 10ರವರೆಗೆ ಪ್ರತಿದಿನ ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಕೆಎಂಸಿ ಆಸ್ಪತ್ರೆ, ಅತ್ತಾವರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ ಲಭ್ಯವಿರಲಿದೆ.

ವೃದ್ಧಾಪ್ಯ ಚಿಕಿತ್ಸೆಯು ನಿರ್ದಿಷ್ಟ ಕಾಯಿಲೆಗಳ ಚಿಕಿತ್ಸೆಗೆ ಮಾತ್ರ ಸೀಮಿತವಾಗದೆ, ಹಿರಿಯರ ದೈಹಿಕ ಸಾಮರ್ಥ್ಯ, ದೈನಂದಿನ ಚಟುವಟಿಕೆಗಳು ಹಾಗೂ ಸಾಮಾಜಿಕ ಯೋಗಕ್ಷೇಮ ಸೇರಿದಂತೆ ಸಮಗ್ರ ಆರೋಗ್ಯ ಅಗತ್ಯಗಳನ್ನು ಪರಿಗಣಿಸುತ್ತದೆ. ನಿಯಮಿತ ಆರೋಗ್ಯ ತಪಾಸಣೆ ಹಾಗೂ ಸಕಾಲಿಕ ವೈದ್ಯಕೀಯ ನೆರವಿನಿಂದ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು, ಸ್ವಾವಲಂಬನೆ ಕಾಪಾಡಿಕೊಳ್ಳಲು ಹಾಗೂ ಜೀವನದ ಗುಣಮಟ್ಟ ಸುಧಾರಿಸಲು ಸಾಧ್ಯವಾಗುತ್ತದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

60 ವರ್ಷ ಹಾಗೂ ಮೇಲ್ಪಟ್ಟ ಹಿರಿಯ ನಾಗರಿಕರು ಈ ಉಚಿತ ಆರೋಗ್ಯ ಸಮಾಲೋಚನೆಯ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆಯ ವೃದ್ಧಾಪ್ಯ ವೈದ್ಯಕೀಯ ವಿಭಾಗ ಮನವಿ ಮಾಡಿದೆ.

ಅಪಾಯಿಂಟ್‌ಮೆಂಟ್ ಹಾಗೂ ಹೆಚ್ಚಿನ ಮಾಹಿತಿಗೆ: 88615 86249

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *