ಬೆಂಗಳೂರು: ರಾಜ್ಯ ಸರ್ಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಪ್ರಧಾನ ಕಾರ್ಯದರ್ಶಿಯಾಗಿದ್ದ ಪಂಕಜ್ ಕುಮಾರ್ ಪಾಂಡೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಆಗಿದ್ದ ಸಲ್ಮಾ ಕೆ. ಫಾಹೀಮ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%




