ತ್ರಿಷಾ ಕಾಲೇಜಿನಲ್ಲಿ ರಕ್ತದಾನ ಶಿಬಿರ: ವಿದ್ಯಾರ್ಥಿಗಳಿಂದ ಸ್ವಯಂಪ್ರೇರಿತ ರಕ್ತದಾನ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ

Spread the love

ಮಂಗಳೂರು: ರಕ್ತದಾನದ ಮಹತ್ವವನ್ನು ತಿಳಿಸುವುದರ ಜತೆಗೆ ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ಮಂಗಳೂರಿನ ತ್ರಿಷಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್ ಹಾಗೂ ತ್ರಿಷಾ ಸಂಧ್ಯಾ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಯಿತು. ಶಿಬಿರದಲ್ಲಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರು.

ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರದ ಕೆಎಂಸಿ ಆಸ್ಪತ್ರೆ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದಲ್ಲಿ ಶಿಬಿರ ನಡೆಯಿತು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸಂಧ್ಯಾ ರಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಅತ್ತಾವರದ ರಕ್ತಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೈಸ್ಲಿನ್, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿಯ ಅಧ್ಯಕ್ಷೆ ಲಯನ್ ಡಾ. ವಿದ್ಯಾಧಾರಿ ಶೆಟ್ಟಿ, ವಲಯ 12 ರಂದು ಅಧ್ಯಕ್ಷೆ ಲಯನ್ ಆಶಾ ನಾಗರಾಜ್ ಹಾಗೂ 285 ರಕ್ತದಾನ ಶಿಬಿರಗಳನ್ನು ಸಂಘಟಿಸಿರುವ ಲಯನ್ ಎನ್.ಜೆ. ನಾಗೇಶ್ ಎಂ.ಜೆ.ಎಫ್. ಮುಖ್ಯ ಅತಿಥಿಗಳಾಗಿ ಇದ್ದರು.

ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಕಾರ್ಯದರ್ಶಿ ಸಹನಾ ಶೆಟ್ಟಿ, ಯುವ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿ ಪ್ರೊ. ಶಿಲ್ಪಾ ಶೆಟ್ಟಿ ಹಾಗೂ ಘಟಕದ ಕಾರ್ಯದರ್ಶಿ ಚೈತನ್ಯ ಇದ್ದರು.

ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ತಂಡದ ನೇತೃತ್ವದಲ್ಲಿ ರಕ್ತದಾನ ಪ್ರಕ್ರಿಯೆ ನಡೆಯಿತು. ರಕ್ತದಾನದ ಮೂಲಕ ಅಗತ್ಯವಿರುವ ರೋಗಿಗಳ ಜೀವ ಉಳಿಸಲು ನೆರವಾಗಬಹುದು ಎಂಬ ಸಂದೇಶವನ್ನು ಶಿಬಿರದ ಮೂಲಕ ಸಾರಲಾಯಿತು. ಸ್ವಯಂಪ್ರೇರಿತ ರಕ್ತದಾನದ ಅಗತ್ಯ ಹಾಗೂ ಅದರ ಸಾಮಾಜಿಕ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ನಡೆದ ಶಿಬಿರವು ಯುವಜನರಲ್ಲಿ ಮಾನವೀಯ ಮೌಲ್ಯಗಳು, ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಪ್ರಯತ್ನಕ್ಕೆ ಪೂರಕವಾಯಿತು.

Leave a Reply

Your email address will not be published. Required fields are marked *