ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಮೀನಾ ಜೆ. ಪಣಿಕ್ಕರ್ ಪಿಎಚ್‌ಡಿ ನಂತರದ ಸಂಶೋಧನೆ ಯಶಸ್ವಿ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸಿಕೊಂಡಿರುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮುದಾಯಗಳ ಕುರಿತು ಅಧ್ಯಯನ ನಡೆಸಿರುವ ಮಂಗಳೂರು ವಿವಿ ಅಧೀನದ ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಮೀನಾ ಜೆ. ಪಣಿಕ್ಕರ್ ಅವರು ಪಿಎಚ್‌ಡಿ ನಂತರದ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆಯಲ್ಲಿ (ಐಎಸ್‌ಇಸಿ) ಡಾ. ಸೋಬಿನ್ ಜಾರ್ಜ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ಕೈಗೊಳ್ಳಲಾಗಿತ್ತು. ಕರ್ನಾಟಕದ ಎರಡು ಜಿಲ್ಲೆಗಳು ಹಾಗೂ ಕೇರಳದ ಐದು ಜಿಲ್ಲೆಗಳಲ್ಲಿ ಸಂಶೋಧನೆ ನಡೆಸಿ, ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸಿಕೊಂಡಿರುವ ಸಮುದಾಯಗಳ ಸಾಮಾಜಿಕ ಮತ್ತು ಸಾಂಸ್ಕೃತಿಕ ಆಯಾಮಗಳನ್ನು ಅಧ್ಯಯನ ಮಾಡಲಾಗಿದೆ.

ಈ ಸಂಶೋಧನೆಯು 2027ರ ವೇಳೆಗೆ ಪುಸ್ತಕದ ರೂಪದಲ್ಲಿ ಪ್ರಕಟವಾಗುವ ನಿರೀಕ್ಷೆಯಿದ್ದು, ಅಂತರ ರಾಷ್ಟ್ರೀಯ ಪ್ರಕಾಶಕರ ಮೂಲಕ ಬಿಡುಗಡೆ ಆಗಲಿದೆ ಎಂದು ತಿಳಿಸಲಾಗಿದೆ.

ಡಾ. ಮೀನಾ ಜೆ. ಪಣಿಕ್ಕರ್ ಅವರು ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಖಾಸಗಿ ಕಾಲೇಜುಗಳ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇಂಗ್ಲಿಷ್ ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಗಳಿಸಿರುವ ಅವರು, ಸಾಂಸ್ಕೃತಿಕ ಅನುವಾದ ವಿಷಯದಲ್ಲಿ ಪಿಎಚ್‌ಡಿ ವಿಶೇಷ ಅಧ್ಯಯನ ನಡೆಸಿದ್ದಾರೆ.
ಅವರ ಈ ಶೈಕ್ಷಣಿಕ ಸಾಧನೆಗೆ ಶೈಕ್ಷಣಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *