ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 11,39,623 ಮತದಾರರು ಇದ್ದಾರೆ. ಇವರಲ್ಲಿ 5,70,006 ಪುರುಷರು, 5,69,614 ಮಹಿಳೆಯರು ಹಾಗೂ ಮೂವರು ಇತರೆ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಿದ ಬಳಿಕ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.



