ಬೆಂಗಳೂರು: ರಾಜ್ಯ ಸರಕಾರ ಆಡಳಿತ ಯಂತ್ರಕ್ಕೆ ವೇಗ ನೀಡುವ ಉದ್ದೇಶದಿಂದ ರಾಜ್ಯದ 14 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಆದೇಶ ಹೊರಿಡಿಸಿದೆ.
ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್ ಅವರನ್ನು ರಾಜ್ಯ ಸರಕಾರ ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿ ವರ್ಗಾವಣೆ ಮಾಡಿದೆ. ಅವರು ಈ ಹಿಂದೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಸಚಿವೆಯಾಗಿ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪವಿಭಾಗಾಧಿಕಾರಿಯಾಗಿ ಮುಕುಂದಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದೆ.



