ಏಕನಿವೇಶನ ವಿನ್ಯಾಸ ಅನುಮೋದನೆ: ಮೂಡಾ ಅಧ್ಯಕ್ಷ ಸಂತೋಷ ಶೆಟ್ಟಿ ನೇತೃತ್ವದಲ್ಲಿ ಚರ್ಚೆ

ಮಂಗಳೂರು ಜಿಲ್ಲಾ ಸುದ್ದಿ ಪುತ್ತೂರು ಮಹಾನಗರ

Spread the love

ಮಂಗಳೂರು: ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಗಳ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ಕ್ರಮಗಳ ಕುರಿತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಮಹತ್ವದ ಚರ್ಚೆ ನಡೆಯಿತು.

ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮುಡಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಏಕನಿವೇಶನ ವಿನ್ಯಾಸಕ್ಕೆ ಅನುಮೋದನೆ ನೀಡುವ ಪ್ರಕ್ರಿಯೆಯಲ್ಲಿ ಸಾರ್ವಜನಿಕ ರಸ್ತೆಗಳನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಮಾಲೋಚನೆ ನಡೆಸಲಾಯಿತು.

ಸಾರ್ವಜನಿಕ ರಸ್ತೆಗಳ ವ್ಯಾಪ್ತಿ, ಅವುಗಳಿಗೆ ಸಂಬಂಧಿಸಿದ ನಿಯಮಗಳು ಹಾಗೂ ಏಕನಿವೇಶನ ವಿನ್ಯಾಸಗಳ ಅನುಮೋದನೆ ಸಂದರ್ಭದಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ವಿನ್ಯಾಸ ಅನುಮೋದನೆ ಪ್ರಕ್ರಿಯೆಯಲ್ಲಿ ಸಾರ್ವಜನಿಕ ರಸ್ತೆಗಳ ವಿಚಾರವನ್ನು ಪರಿಗಣಿಸುವ ಅಗತ್ಯ ಮತ್ತು ಈ ಸಂಬಂಧ ಅನುಸರಿಸಬೇಕಾದ ನಿಯಮಾವಳಿಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು.

ಸಭೆಯಲ್ಲಿ ಮುಡಾ ಕಮಿಷನರ್ ನಜೀರ್ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಮುಡಾದ ವಿವಿಧ ಅಧಿಕಾರಿಗಳು ಇದ್ದರು.

 

Leave a Reply

Your email address will not be published. Required fields are marked *