ಮೈಸೂರು: ಮೈಸೂರು ನಗರ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪ್ರಸ್ತುತ ಪೊಲೀಸ್ ಆಯುಕ್ತರಾಗಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ವಿಷ್ಣುವರ್ಧನ್ ಅವರನ್ನು ನಿಯೋಜಿಸಲಾಗಿದೆ.
ಎನ್. ವಿಷ್ಣುವರ್ಧನ್ ಅವರು ಈವರೆಗೆ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ (ಕೆಪಿಎ) ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ನಗರ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡಲಾಗಿದೆ.
2024ರ ಜುಲೈ 5ರಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ವಿಷ್ಣುವರ್ಧನ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ಈ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವೆಗಳು-4) ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎಸ್. ಸಂಜಯ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.





