ಅಂತರ ರಾಷ್ಟ್ರೀಯ ಕ್ರೀಡಾಂಗಣವಾಗಿ ಮಂಗಳ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವ ಖಾದರ್ ಚರ್ಚೆ

ಕ್ರೀಡೆ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ಮಂಗಳೂರಿನ ಕ್ರೀಡಾ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ಉದ್ದೇಶದಿಂದ ಮಂಗಳ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ತಾಣವನ್ನಾಗಿ ರೂಪಿಸುವ ಯೋಜನೆಗೆ ಸಿದ್ಧತೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಅಭಿವೃದ್ಧಿ ಯೋಜನೆಯ ರೂಪುರೇಷೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಸಮಾಲೋಚನೆ ನಡೆಸಿದ ಸಚಿವರು, ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ, ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ವಿವಿಧ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಪ್ರದೀಪ್ ಡಿಸೋಜ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೇಜಸ್ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

20 ಕೋಟಿ ವೆಚ್ಚದ ಯೋಜನೆ

ಮಂಗಳ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣವಾಗಿ ₹20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಈ ಯೋಜನೆಯಡಿ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ಕುರಿತು ಚರ್ಚೆ ನಡೆಯಿತು.

Leave a Reply

Your email address will not be published. Required fields are marked *