ಮಂಗಳೂರು: ನಗರದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.
ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನ.19ರಂದು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಗರದ ಅಭಿವೃದ್ಧಿ, ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಯೋಜನೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಚರ್ಚಿಸಲಾಯಿತು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮುಡಾ ಆಯುಕ್ತ ಮೊಹಮ್ಮದ್ ನಝೀರ್, ಪ್ರಾಧಿಕಾರದ ಸದಸ್ಯರಾದ ನೀರಜ್ ಪಾಲ್, ಸುಮನ್ ದಾಸ್, ಸಬಿತಾ ಮಿಸ್ಕಿತ್ ಸೇರಿದಂತೆ ಮುಡಾ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


