ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್‌ಗೆ ಪ್ರೊ. ಶ್ರೀನಾಥ್ ರಾವ್ ಅಭಿನಂದನೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ ಶಿರಸಿ

Spread the love

ಉಡುಪಿ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸಾಮಾಜಿಕ ಜಾಲತಾಣ ಸಂಚಾಲಕ ಪ್ರೊ. ಶ್ರೀನಾಥ್ ರಾವ್ ಕೆ. ಅವರು ಅಮ್ಮುಂಜೆಯಲ್ಲಿ ಇರುವ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪ್ರಮೋದ್ ಮಧ್ವರಾಜ್ ಅವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದ ಪ್ರೊ. ಶ್ರೀನಾಥ್ ರಾವ್, ನೂತನ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸುವಂತಾಗಲಿ ಎಂದು ಹಾರೈಸಿದರು.

ಭೇಟಿಯ ಸಂದರ್ಭದಲ್ಲಿ ಉಭಯರೂ ಆತ್ಮೀಯವಾಗಿ ಮಾತುಕತೆ ನಡೆಸಿದರು. ತಮ್ಮ ನಿವಾಸಕ್ಕೆ ಭೇಟಿ ನೀಡಿ ಅಭಿನಂದಿಸಿ ಶುಭ ಹಾರೈಸಿದ ಪ್ರೊ. ಶ್ರೀನಾಥ್ ರಾವ್ ಕೆ. ಅವರಿಗೆ ಪ್ರಮೋದ್ ಮಧ್ವರಾಜ್ ಕೃತಜ್ಞತೆ ಸಲ್ಲಿಸಿದರು.

Leave a Reply

Your email address will not be published. Required fields are marked *