ಸಿದ್ದಾಪುರ: ಬೀಗ ಹಾಕಿದ ಮನೆಗಳ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಎನ್ನುವ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಉತ್ತರ ಕನ್ನಡ ಜಿಲ್ಲಾ ಪೊಲೀಸರು “ರಕ್ಷಾ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿದ್ದಾರೆ.

ಸಾರ್ವಜನಿಕರು ಪ್ರವಾಸ, ಮದುವೆ, ಇತರೆ ಕಾರ್ಯಗಳ ಅಂಗವಾಗಿ ತಮ್ಮ ಮನೆಗಳ ಬೀಗ ಹಾಕಿಕೊಂಡು ಹೊದಲ್ಲಿ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ಸಂಖ್ಯೆ 8277988303 ಗೆ ವ್ಯಾಟ್ಸ ಆಪ್ ಬರ್ ಗೆ ಮಾಹಿತಿ ನೀಡಿದಲ್ಲಿ ವಾಪಸ್ಸು ಬರುವವರೆಗೆ ಸ್ಥಳಿಯ ಪೊಲೀಸರು ಮನೆ ಸುರಕ್ಷಿತವಾಗಿ ನೋಡಿಕೊಳ್ಳಲಿದ್ದಾರೆ. ಮನೆ ಕಳ್ಳತನ ಪ್ರಕರಣಗಳನ್ನು ತಡೆಗಟ್ಟುವುದೇ ಕಾರ್ಯಕ್ರಮದ ಮೂಲ ಉದ್ದೇಶ.
ಸಿದ್ದಾಪುರ ಪಟ್ಟಣದ ಬಸ್ ನಿಲ್ದಾಣ, ಶಾಲಾ ಕಾಲೇಜುಗಳು,ಆಸ್ಪತ್ರೆ ಮುಂತಾದ ಜನಸಂದಣಿ ಪ್ರದೇಶಗಳಲ್ಲಿ ಪೊಸ್ಟರ್ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಯಿತು.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರೀಷ್ಠಾಧಿಕಾರಿಗಳಾದ ಜಿ ಕೃಷ್ಣಮೂರ್ತಿ ಹಾಗೂ ಸಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್, ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜೆ.ಬಿ ಸೀತಾರಾಮ ಅವರ ಮಾರ್ಗದರ್ಶನದಲ್ಲಿ ಸಿದ್ದಾಪುರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ನಾಗಪ್ಪ ಬಿ ನೇತೃತ್ವದಲ್ಲಿ ಸಿಬ್ಬಂದಿ ಗಿರೀಶಯ್ಯ, ರಮೇಶ ಕೊಳ್ಳೆಗಾಲ,ಧನಂಜಯ ನಾಯ್ಕ ಇತರರು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.




