60 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ 

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love
ಮಂಗಳೂರು:  ಜೂನ್ 1  ರಿಂದ ಜುಲೈ 31 ರವರೆಗೆ ಮೀನುಗಾರಿಕೆಗೆ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದು, ಈ ವೇಳೆಯಲ್ಲಿ ಮೀನುಗಾರಿಕೆಗೆ ತೆರಳದಂತೆ  ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಮೀನುಗಾರಿಕೆಗೆ ನೀಷೆಧ ಹಾಕಲಾಗಿದೆ. 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು  ನಿಷೇಧದ ಅವಧಿಯಲ್ಲಿ ಜಿಲ್ಲೆಯಲ್ಲಿ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಮತ್ತು ಸಾಂಪ್ರದಾಯಿಕ ನಾಡದೋಣಿಗಳು ಕರಾವಳಿ ಮೀನುಗಾರಿಕೆ ಕೈಗೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
   ಮೀನುಗಾರಿಕೆ ನಿಷೇಧಿಸಿದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆ ಆಗುವುದಲ್ಲದೇ ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹ ಆಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ ಎಂದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Related posts:

Leave a Reply

Your email address will not be published. Required fields are marked *