ಆಳ್ವಾಸ್ ಗೆ ಥ್ರೋಬಾಲ್ ನಲ್ಲಿ 21 ನೇ ಬಾರಿಯೂ ಚಾಂಪಿಯನ್ ಪಟ್ಟ

ಕ್ರೀಡೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ, 21ನೇ ಬಾರಿಯೂ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

<

ಕ್ವಾರ್ಟರ್ ಫೈನಲ್ ಮಡಂತ್ಯಾರ್‌ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡ 25 -10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ಫೈನಲ್ ಹಣಾಹಣಿಯಲ್ಲಿ ಮಂಗಳೂರು ವಿವಿ ಕ್ಯಾಂಪಸ್ ತಂಡವನ್ನು 25-18 ಮತ್ತು 25-16 ಅಂಕಗಳ ನೇರ ಸೆಟ್‌ನಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್‌ ಷಿಪ್ ಕಿರೀಟವನ್ನು ತನ್ನದಾಗಿಸಿಕೊಂಡಿತು.
ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *