ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿನ ಪಯಣದ ಸವಿನೆನಪು, 4 ಅತ್ಯಾಧುನಿಕ ಶೈಲಿಯ ಸಭಾ ಭವನಗಳ ಲೋಕಾರ್ಪಣೆ 23 ಕ್ಕೆ: ಕೃಷ್ಣ ಜೆ. ಪಾಲೇಮಾರ್

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಿಗಾಗಿ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿರುವ ನಾಲ್ಕು ಅತ್ಯಾಧುನಿಕ ಶೈಲಿಯ ಹಾಗೂ ಸೌಲಭ್ಯ ಹೊಂದಿರುವ ಸಭಾಭವನಗಳು ಇದೇ 23 ರಂದು ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಲ್ಯಾಂಡ್ ಲಿಂಕ್ಸ್ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ ಪಾಲೇಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

<

ಅತ್ಯಾಧುನಿಕ ಸೌಲಭ್ಯಗಳು, ಐಷಾರಾಮಿ ವಿನ್ಯಾಸ ಹಾಗೂ ಪ್ರಕೃತಿ ಸೊಬಗನ್ನು ಮೈಗೂಡಿಸಿ ಕೊಂಡಿರುವ ಈ ನಾಲ್ಕು ಅದ್ದೂರಿ ಪಾಲೇಮಾರ್ ಸಭಾಂಗಣಗಳ ಮಹಾ ಲೋಕಾರ್ಪಣಾ ಸಮಾರಂಭ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಮೇರಿಹಿಲ್‌ನಲ್ಲಿರುವ ಪಾಲೇಮಾರ್‌ ಸಭಾಂಗಣದಲ್ಲಿ ನಡೆಯಲಿದೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ಸ್ಪೀಕರ್ ಯು. ಟಿ. ಖಾದರ್, ಸಂಸದ ಕ್ಯಾ. ಬ್ರಿಜೇಶ್‌ ಚೌಟ, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಹಾಗೂ ಎಂಎಲ್ಸಿ ಐವನ್‌ ಡಿಸೋಜ ಸೇರಿದಂತೆ ಕರಾವಳಿ ಮತ್ತು ರಾಜ್ಯ ಮಟ್ಟದ ಹಲವು ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು ಹಾಗೂ ಉದ್ಯಮಿಗಳು ಭಾಗವಹಿಸಲಿದ್ದಾರೆ ಎಂದರು.

ಈ ಮಹತ್ವಾಕಾಂಕ್ಷಿ ಯೋಜನೆ ಕನಸಿನ ಕೂಸಾಗಿದೆ. ಕರಾವಳಿಯ ಸಾಂಸ್ಕೃತಿಕ ಶ್ರೀಮಂತಿಕೆಗೆ ಒತ್ತು ನೀಡುವುದು ಮತ್ತುಇಲ್ಲಿನ ಜನರಿಗೆ ಸುಲಭವಾಗಿ ಕೈಗೆಟುಕುವ ದರದಲ್ಲಿಅತ್ಯುನ್ನತ ಸೌಲಭ್ಯಗಳ ಸಭಾಂಗಣಗಳನ್ನು ಒದಗಿಸುವುದು ಮೂಲ ಉದ್ದೇಶವಾಗಿದೆ. ಈ ಸಭಾಭವನಗಳು ವಿವಾಹ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು, ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು, ಉದ್ಯೋಗ ಮೇಳಗಳು, ವಸ್ತು ಪ್ರದರ್ಶನಗಳು, ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಮಹಿಳಾ ಸಬಲೀಕರಣದಂತಹ ಸಮಾಜಮುಖಿ ಚಟುವಟಿಕೆಗಳಿಗೆ ಮುಕ್ತವಾಗಿರಲಿವೆ ಎಂದರು.

ಈ ನಾಲ್ಕು ಸಭಾಭವನಗಳನ್ನು ನಾನು ಕೇವಲ ಒಬ್ಬ ಉದ್ಯಮಿ ಲಾಭದ ದೃಷ್ಟಿಯಿಂದ ನಿರ್ಮಿಸಿದ್ದಲ್ಲ. ಕರಾವಳಿಯ ಜನತೆ 45 ವರ್ಷಗಳಿಂದ ನಮಗೆ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಪ್ರತಿಯಾಗಿ, ಸಮಾಜಕ್ಕೆಏನಾದರೂ ಕೊಡುಗೆ ನೀಡಬೇಕು ಎಂಬ ಸದುದ್ದೇಶದಿಂದ ಇವುಗಳನ್ನು ರೂಪಿಸಿದ್ದೇನೆ. ಬಡ ಕುಟುಂಬಗಳ ಸಾಮೂಹಿಕ ವಿವಾಹದಂತಹ ಸಂದರ್ಭದಲ್ಲಿ ಹೆತ್ತವರ ಕಣ್ಣಲ್ಲಿ ಕಾಣುವ ಸಾರ್ಥಕತೆ ಮತ್ತು ನೆಮ್ಮದಿಯ ಭಾವವೇ ನನಗೆ ನಿಜವಾದ ಸಂಪತ್ತು. ನಮ್ಮ ಈ ಸಂಸ್ಥೆ ಸದಾ ಸಾರ್ವಜನಿಕರ ಹಿತ ಬಯಸುತ್ತದೆ ಎಂದರು.

ಪಾಲೇಮಾರ್ ಕನ್ವೆನ್ಷನ್ ಸೆಂಟರ್ : ಸಾಂಪ್ರದಾಯಿಕತೆ ಮತ್ತು ಆಧುನಿಕತೆಯ ಸಮ್ಮಿಲನ ಆಗಿರುವ ಈ ಸಭಾಂಗಣದಲ್ಲಿ ಅತ್ಯಾಧುನಿಕ ಒಳಾಂಗಣ ಸಭಾಂಗಣ, ಅತಿಥಿ ಕೊಠಡಿಗಳು, ಪ್ರಾರ್ಥನಾ ಮಂದಿರ ಮತ್ತು ವಿಶಾಲ ಪಾರ್ಕಿಂಗ್ ವ್ಯವಸ್ಥೆ ಇದೆ.

ಪಾಲೇಮಾರ್ ಗಾರ್ಡನ್ : ಹಸಿರು ಪರಿಸರದ ಮಧ್ಯೆ ನಿರ್ಮಾಣಗೊಂಡಿರುವ ಈ ಗಾರ್ಡನ್‌ನಲ್ಲಿ ಒಳಾಂಗಣ ಮತ್ತು ತೆರೆದ ಸಭಾಂಗಣ, ಕಾಟೇಜ್‌ಗಳು, ಈಜುಕೊಳ ಹಾಗೂ ವಿಶಾಲ ಮೈದಾನವಿದೆ.

ಪಾಲೇಮಾರ್ ಫಾರ್ಮ್ಸ್ : 20 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಫಾರ್ಮ್ಸ್ ಮದುವೆ, ಮೆಹೆಂದಿ, ಬರ್ತ್‌ಡೇ ಪಾರ್ಟಿ ಸೇರಿದಂತೆ ಹೊರಾಂಗಣ ಕಾರ್ಯಕ್ರಮಗಳಿಗೆ ಸೂಕ್ತವಾಗಿದೆ.

ನೇತ್ರಾವತಿ ಸಭಾಭವನ : ನೇತ್ರಾವತಿ ನದಿ ತಟದಲ್ಲಿರುವ ಈ ಸಭಾಂಗಣ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಾಹ ಕಾರ್ಯಕ್ರಮಗಳಿಗೆ ಅನುಕೂಲಕರವಾಗಿದೆ. ಇಲ್ಲಿ ಕೇವಲ ಸಸ್ಯಾಹಾರಿ ಆಹಾರ ತಯಾರಿಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.

ಸಾಮಾಜಿಕ ಬದ್ಧತೆ ಮತ್ತು ಉಚಿತ ಸೇವೆ
ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಸದಾ ಸಾಮಾಜಿಕ ಕಳಕಳಿಗೆ ಹೆಸರುವಾಸಿಯಾಗಿದೆ. ಜಾತಿ, ಧರ್ಮ, ಬಡವ-ಬಲ್ಲಿದ ಎಂಬ ಯಾವುದೇ ಭೇದ ಭಾವವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವುದು ಸಂಸ್ಥೆಯ ಮುಖ್ಯ ಧ್ಯೇಯ. ಈ ಸಾಮಾಜಿಕ ಬದ್ಧತೆ ಭಾಗವಾಗಿ, ಸಮಾಜದ ಒಳಿತಿಗಾಗಿ ಆಯೋಜಿಸುವ ಸಾಮೂಹಿಕ ವಿವಾಹಗಳು ಹಾಗೂ ಸದುದ್ದೇಶದ ಉದಾತ್ತ ಸಾರ್ವಜನಿಕ ಕಾರ್ಯಕ್ರಮಗಳಿಗೆ ಈ ಎಲ್ಲಾ ಸಭಾಂಗಣಗಳನ್ನು ನಿಯಮಾನುಸಾರವಾಗಿ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದರು.

ಶೈಕ್ಷಣಿಕ ಸಾಧಕರಿಗೆ ಗೌರವ

ಲೋಕಾರ್ಪಣಾ ಸಮಾರಂಭದ ಮತ್ತೊಂದು ವಿಶೇಷ ಆಕರ್ಷಣೆಯಾಗಿ, ಶಿಕ್ಷಣ ಕ್ಷೇತ್ರಕ್ಕೆಅಪಾರಕೊಡುಗೆ ನೀಡುತ್ತಿರುವ ವಿಕಾಸ್‌ಎಜ್ಯುಕೇಶನ್‌ಟ್ರಸ್ಟ್ ವತಿಯಿಂದ ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಈ ಮೂಲಕ ಯುವ ಪೀಳಿಗೆಯು ದೇಶದ ಪ್ರಗತಿಗೆ ಮತ್ತಷ್ಟುಕೊಡುಗೆ ನೀಡಲು ಸ್ಫೂರ್ತಿ ತುಂಬಲಾಗುವುದು ಎಂದರು.

ಇದೇ ಮೊದಲ ಬಾರಿಗೆ, ಕಡಲ ನಗರಿ ಮಂಗಳೂರಿನ ಸಮುದ್ರತೀರದಲ್ಲಿಅದ್ದೂರಿ, ಭವ್ಯ ಸಮಾರಂಭಗಳನ್ನು ನಡೆಸಲು ಸುಸಜ್ಜಿತ ತೆರೆದ ಸಭಾಂಗಣ ಸಿದ್ಧಗೊಳ್ಳುತ್ತಿದೆ. ಶೀಘ್ರದಲ್ಲೇ ಈ ಸಭಾಂಗಣವೂ ಸಾರ್ವಜನಿಕರಿಗಾಗಿ ಲಭ್ಯವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 7411394759, 7483574759, 9148435759 ಸಂಖ್ಯೆ ಹಾಗೂ ಅಧಿಕೃತ ವೆಬ್‌ಸೈಟ್: www.palemar.com ಭೇಟಿ ನೀಡುವಂತೆ ತಿಳಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *