ಕಲಬುರಗಿ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವು

ಅಂತರ ಜಿಲ್ಲೆ ಅಪರಾಧ ರಾಜ್ಯ

Spread the love

ಕಲಬುರಗಿ: ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

<

ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ.

ಕುಟುಂಬದ ಸದಸ್ಯರು ಯಾದಗಿರಿಯಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐದು ಮಂದಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬಂದು ಪರಿಶೀಲನೆ ನಡೆಸಿ, ನುಜ್ಜುಗುಜ್ಜಾದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *