ಭಟ್ಕಳ ದುರಂತ, ಮೃತರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದಾರಾಮಯ್ಯ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ರಾಜ್ಯ ಶಿರಸಿ
<

Spread the love

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಎಂಬ ಕಡಲ ತೀರದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಆಘಾತ ಉಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

<

ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿ ಇದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿ ಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *