ಮಂಗಳೂರು ಪ್ರೆಸ್ ಕ್ಲಬ್ ದಿನ, ಪ್ರಶಸ್ತಿ ಪ್ರದಾನ ಮಾಡಿದ ಎಂಎಲ್ಸಿ ಐವನ್ ಡಿಸೋಜ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ
<

Spread the love

ಮಂಗಳೂರು : ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಎಂಎಲ್ಸಿ ಐವನ್ ಡಿಸೋಜ ಅವರು ಹೇಳಿದರು.

<

ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿ, ಪೊಲೀಸರಷ್ಟೇ ವೇಗವಾಗಿ ಘಟನಾ ಸ್ಥಳಗಳಿಗೆ ತೆರಳಿ ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ವಿವೇಚನೆಯಿಂದ ವರದಿ ಮಾಡುವ ಪತ್ರಕರ್ತರ ಬದ್ಧತೆ
ಶ್ಲಾಘನೀಯ’ಎಂದರು.

ಪ್ರಶಸ್ತಿ ಪ್ರದಾನ ಮಾಡಿದ ಮಾತನಾಡಿದ ಡಿಸಿಪಿ ಎಚ್. ಎನ್. ಮಿಥುನ್ ಅವರು, ಮಂಗಳೂರಿನ ಪತ್ರಕರ್ತರು ಸಂಯಮ ಮತ್ತು ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವಕರನ್ನು ಗುರುತಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ’ಎಂದರು.
ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್.ಜಿ. ಬೆಳ್ತಂಗಡಿ ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಅವರು ಪ್ರೆಸ್ ಗೌರವ ಸನ್ಮಾನಕ್ಕೆ ಆಯ್ಕೆಯಾದವರನ್ನು ಗೌರವಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಇದ್ದರು.

ಮಹಮ್ಮದ್ ಆರಿಫ್ ಪಡುಬಿದ್ರಿ, ಆತ್ಮಭೂಷಣ್ ಭಟ್, ವಿಲ್ಫ್ರೆಡ್ ಡಿಸೋಜ, ದಯಾ ಕುಕ್ಕಾಜೆ, ವಿಜಯ ಕೋಟ್ಯಾನ್ ಪಡು ಸನ್ಮಾನಿತರನ್ನು ಪರಿಚಯಿಸಿದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು.

ಪ್ರೆಸ್ ಗೌರವ ಸನ್ಮಾನ

ಪ್ರೆಸ್ ಗೌರವ ಸನ್ಮಾನಕ್ಕೆ ಆಯ್ಕೆಯಾದ ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ .ವೈ., ಹರ್ಷ, ರೇಮಂಡ್ ಡಿಕೂನಾ ಮತ್ತು ಆರ್.ಎಂ.ರಾಜೇಂದ್ರನ್ ಅವರನ್ನು ಗೌರವಿಸಲಾಯಿತು. ಮಾಧ್ಯಮ ಅಕಾಡೆಮಿ ವಿಶೇಷ ಪ್ರಶಸ್ತಿ ಪುರಸ್ಕೃತ ಆನಂದ ಶೆಟ್ಟಿ, ಕೆಯುಡಬ್ಲುಜೆ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ.ಆರ್., ರಾಜೇಶ್.ಶೆಟ್ಟಿ ದೋಟ,
ಅಬ್ದುಲ್ ರಹಿಮಾನ್ .ಟಿ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ್ ಇರಾ, ರಾಜೇಶ್ ಶೆಟ್ಟಿ ದಡ್ಡಂಗಡಿ, ಎ.ಕೆ.ಕುಕ್ಕಿಲ, ಸುಳ್ಯ ತಾಲೂಕು ಕಸಾಪ ಪ್ರಶಸ್ತಿ ಪುರಸ್ಕೃತ ಹರೀಶ್ ಮೋಟುಕಾನ ಅವರನ್ನು ಸನ್ಮಾನಿಸಲಾಯಿತು.

 

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *