ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ? ರಾಜ್ಯ ಸಭೆ ಆಫರ್ ನೀಡಿದ ರಾಹುಲ್

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ ಶಿರಸಿ
<

Spread the love

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೊನೆಗೂ ತಿರುವು ಪಡೆದುಕೊಂಡಿದೆ. ನವದೆಹಲಿಯಲ್ಲಿ ನಡೆದ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.

<

ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಆಪ್ತರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದು, ನಿಮ್ಮ ಪರವಾಗಿ ನಾವೇ ರಾಹುಲ್​ ಗಾಂಧಿ ಬಳಿ ಮಾತನಾಡುತ್ತೇವೆ ಎಂದಿದ್ದಾರೆ. ಆದರೆ ಇದಕ್ಕೆ ಸಿದ್ದರಾಮಯ್ಯ, ಇಲ್ಲ, ನಾನು ರಾಹುಲ್​ ಗಾಂಧಿಯವರನ್ನು ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ಕೊಡುತ್ತೇನೆ, ನೀವು ಬೇಕಾದ್ರೆ ಹೋಗಿ ಮಾತಾಡಿ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *