ಮೂಡುಬಿದಿರೆ ಆಳ್ವಾಸ್ ಪದವಿ ಪ್ರದಾನ ಸಮಾರಂಭ, ಪದವಿ ಪ್ರಮಾಣ ಪತ್ರಕ್ಕಿಂತ ಮೌಲ್ಯಗಳೇ ಶ್ರೇಷ್ಠ ಎಂದ ಡಾ. ಚಿನ್ನಪ್ಪ ಗೌಡ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ ಶಿರಸಿ
<

Spread the love

ಮೂಡುಬಿದಿರೆ : ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ ನಿಜವಾದ ಮೌಲ್ಯ ದೊರೆಯುವುದು ವ್ಯಕ್ತಿಯ ಜ್ಞಾನ, ಸಾಮರ್ಥ್ಯ, ಪ್ರಾಮಾಣಿಕತೆ ಹಾಗೂ ಜೀವನ ಮೌಲ್ಯಗಳಿಂದ ಮಾತ್ರ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು.

<

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ 2,627 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

ಶಿಕ್ಷಣವು ಕೇವಲ ಶೈಕ್ಷಣಿಕ ಸಾಧನೆಗಳಿಗೆ ಸೀಮಿತವಲ್ಲ. ಕಲಿಕೆಯ ಅವಧಿಯಲ್ಲಿ ವಿದ್ಯಾರ್ಥಿಗಳು ರೂಪಿಸಿಕೊಳ್ಳುವ ವ್ಯಕ್ತಿತ್ವ, ಜೀವನ ಮೌಲ್ಯಗಳು ಹಾಗೂ ಸಾಮಾಜಿಕ ಬದ್ಧತೆಯೇ ಅವರ ನಿಜವಾದ ಗುರುತು ಎಂದು ಅವರು ಹೇಳಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದು, ಸಂಸ್ಥೆ ನೀಡುವ ಪ್ರತಿಯೊಂದು ಪ್ರಮಾಣಪತ್ರವೂ ಅದರ ಪರಂಪರೆ, ಸಂಸ್ಕೃತಿ ಹಾಗೂ ಮೌಲ್ಯಗಳ ಪ್ರತೀಕವಾಗಿದೆ. ಆ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲಿದೆ ಎಂದು ತಿಳಿಸಿದರು.

“ವಿದ್ಯಾರ್ಥಿಗಳು ತಾವು ಆಳ್ವಾಸ್‌ನ ಉತ್ಪನ್ನಗಳು ಎಂಬ ಹೆಮ್ಮೆಯನ್ನು ಹೊಂದಿರಬೇಕು. ಎಲ್ಲೇ ಹೋದರೂ ಆಳ್ವಾಸ್‌ನ ರಾಯಭಾರಿಗಳಾಗಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

20 ಸಾವಿರ ವಿದ್ಯಾರ್ಥಿಗಳನ್ನು ಒಳಗೊಂಡಿರುವ ಆಳ್ವಾಸ್ ಆವರಣವು ಭಾರತದ ಏಕತೆಯಲ್ಲಿ ವೈವಿಧ್ಯತೆಯ ಪರಿಕಲ್ಪನೆಯನ್ನು ಜೀವಂತವಾಗಿ ಪ್ರತಿಬಿಂಬಿಸುತ್ತದೆ. ದೇಶದ ವಿವಿಧ ಭಾಗಗಳಿಂದ ಆಗಮಿಸುವ ವಿದ್ಯಾರ್ಥಿಗಳ ನಡುವೆ ಬೆಳೆಯುವ ಪರಸ್ಪರ ಅರಿವು, ಸಹಬಾಳ್ವೆ ಹಾಗೂ ಸಾಂಸ್ಕೃತಿಕ ವಿನಿಮಯವು ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತದೆ ಎಂದರು.

ಇಂತಹ ಸಮೃದ್ಧ ಶೈಕ್ಷಣಿಕ ಹಾಗೂ ಸಾಮಾಜಿಕ ವಾತಾವರಣವು ವಿದ್ಯಾರ್ಥಿಗಳನ್ನು ಸಾರ್ವಜನಿಕ ಬದುಕಿನ ಸವಾಲುಗಳನ್ನು ಎದುರಿಸಲು, ಸಮಾಜದ ಅಗತ್ಯಗಳಿಗೆ ಸ್ಪಂದಿಸಲು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಸಕಾರಾತ್ಮಕ ಕೊಡುಗೆ ನೀಡಲು ಸಜ್ಜುಗೊಳಿಸುತ್ತದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಜ್ಞಾನವೊಂದೇ ಸಾಕಾಗುವುದಿಲ್ಲ. ವ್ಯಕ್ತಿತ್ವ ನಿರ್ಮಾಣ, ಶಿಸ್ತು, ಸಾಮಾಜಿಕ ಹೊಣೆಗಾರಿಕೆ ಹಾಗೂ ನಿರಂತರ ಕಲಿಕೆಯ ಮನೋಭಾವ ಯಶಸ್ಸಿನ ಪ್ರಮುಖ ಅಂಶಗಳಾಗಿವೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ವಹಿಸಿದ್ದರು. ಟ್ರಸ್ಟಿ ವಿವೇಕ್ ಆಳ್ವ, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಅಧ್ಯಾಪಕರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನ

ಶೈಕ್ಷಣಿಕ ಸಾಧನೆಗಾಗಿ ಡಾ. ಕೇಕೆಸಾನಾ, ಅಂಜನಾ ಎಂ. ಹಾಗೂ ನವರೆನ್ ಸಿಂಗ್ ಅವರಿಗೆ ಪ್ರತಿಷ್ಠಿತ ಡಾ. ಪಿ.ಬಿ. ಆಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅತ್ಯುತ್ತಮ ಸಾಧನೆಗಾಗಿ ಡಾ. ಗೌತಮಿ ಬಿ. ಅವರಿಗೆ ಸೀತಾರಾಂ ಜಿಂದಾಲ್ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *