ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷೇತರ ಎಸ್ ಡಿಪಿಐ ಅಭ್ಯರ್ಥಿ ಜತೆಗೆ ಮಾತನಾಡಿದ್ದಾರೆ ಎನ್ನಲಾದ ಅಡಿಯೊ ಬಾರಿ ಸಂಚಲನಕ್ಕೆ ಕಾರಣವಾಗಿದೆ.
ರಾಜ್ಯದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹತ್ತು ಜನರಿಗೆ ಸಂಪುಟದಲ್ಲಿ ಆರಂಭಿಕ ಅವಕಾಶ ಸಿಗಲಿದೆ. ಜಮೀರ್ ಅಹ್ಮದ್ ಖಾನ್ ಕೂಡ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಈ ಎಲ್ಲ ಬೆಳವಣಿಗೆಯ ನಂತರದಲ್ಲಿ ಇದೀಗ ಜಮೀರ್ ಅವರದ್ದು ಎನ್ನಲಾಗಿರುವ ಅಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಾರಿ ಚರ್ಚೆಗೆ ಗ್ರಾಸ ಆಗಿದೆ.
ಅಡಿಯೊ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಡಿಯೊದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಮಾತನಾಡಿರುವುದು ಬೆಳಕಿಗೆ ಬಂದಿದೆ.
ಕೆಲವು ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ನನ್ನ ಕುರಿತ ಅಡಿಯೊ ನಕಲಿ, ಎಐ ತಂತ್ರಜ್ಞಾನ ಬಳಸಿ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೊಂದು ರಾಜಕೀಯ ಷಡ್ಯಂತ್ರ,ನಕಲಿ ಅಡಿಯೊ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad
