ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅತೀಕ್ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರ ಹುದ್ದೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗೂ ಇತರ ಭತ್ತೆಗಳನ್ನು ನೀಡಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%
