ಅಮೃತ 2.0 ಕಾಮಗಾರಿ ಅವೈಜ್ಞಾನಿಕ ಎಂಬ ಪತ್ರಿಕಾ ವರದಿಗೆ ನಗರಸಭೆ ಕಮಿಷನರ್ ಜಗದೀಶ್ ಸ್ಪಷ್ಟನೆ

ಜಿಲ್ಲಾ ಸುದ್ದಿ ಕಾರವಾರ
<

Spread the love

ಕಾರವಾರ: ಅಮೃತ 2.0 ಯೋಜನೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂಬ ಕುರಿತು ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಿಗೆ ನಗರಸಭೆ ಕಮಿಷನರ್ ಜಗದೀಶ್ ಬಿ.ಹುಲಗೆಜ್ಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

<

ಕಾರವಾರ ನಗರ ವ್ಯಾಪ್ತಿಯಲ್ಲಿ ಅಮೃತ 2.0 ಯೋಜನೆಯಡಿ ₹35 ಕೋಟಿ ವೆಚ್ಚದ ಕಾಮಗಾರಿ ಮಂಜೂರಾಗಿದ್ದು, ಯೋಜನೆಯಡಿ ಅಗತ್ಯವಿರುವ ಪ್ರದೇಶಗಳಲ್ಲಿ ನೀರಿನ ಪೈಪ್‌ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಯೋಜನೆಯ ಕಾಮಗಾರಿಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅನುಷ್ಠಾನಗೊಳಿಸುತ್ತಿದ್ದು, ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೆ ಇದು ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಯೋಜನೆಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಕಾಮಗಾರಿಯನ್ನು ನಿಗದಿತ ಯೋಜನೆ ಮತ್ತು ತಾಂತ್ರಿಕ ಮಾನದಂಡಗಳಂತೆ ಕೈಗೊಳ್ಳಲಾಗುತ್ತಿದೆ ಎಂದು ಪೌರಾಯುಕ್ತರು ಸ್ಪಷ್ಟಪಡಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *