ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತರ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಕುಲಾಧಿಪತಿ ಡಾ. ಶ್ರೀನಿವಾಸ ರಾವ್

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ ಶಿರಸಿ
<

Spread the love

ಮಂಗಳೂರು: ಸ್ಥಳೀಯ ಪ್ರತಿಭೆಗಳಿಗೆ ಜಾಗತಿಕ ಅವಕಾಶಗಳನ್ನು ಕಲ್ಪಿಸುವುದು” ಎಂಬ ಧ್ಯೇಯದೊಂದಿಗೆ ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿವೆ ಎಂದು ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದರು.

<

ಶಿಕ್ಷಣ ತಜ್ಞ ಹಾಗೂ ಸಂಸ್ಥಾಪಕ ದಿವಂಗತ ಡಾ. ಸಿ. ಎ. ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ ಬೆಳೆದಿರುವ ಈ ಸಂಸ್ಥೆಗಳು ಇಂದು ದೇಶದ ಪ್ರಮುಖ ಉನ್ನತ ಶಿಕ್ಷಣ ಸಮೂಹಗಳಲ್ಲಿ ಒಂದಾಗಿ ಗುರುತಿಸಿಕೊಂಡಿವೆ. ಸಂಸ್ಥೆಯು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗಮುಖಿ ಶಿಕ್ಷಣದಲ್ಲಿ ನಿರಂತರ ಸಾಧನೆ ಮಾಡುತ್ತಿದೆ ಎಂದರು.

ಸಂಶೋಧನಾ ಕ್ಷೇತ್ರದಲ್ಲಿಯೂ ಶ್ರೀನಿವಾಸ ವಿಶ್ವವಿದ್ಯಾಲಯವು 593 ಕಾಪಿರೈಟ್‌ಗಳು, 28 ಪೇಟೆಂಟ್‌ಗಳು, 2000ಕ್ಕೂ ಅಧಿಕ ಅಂತರರಾಷ್ಟ್ರೀಯ ಸಂಶೋಧನಾ ಪ್ರಕಟಣೆಗಳು ಹಾಗೂ 15 ಕೋಟಿಗೂ ಹೆಚ್ಚು ಸಂಶೋಧನಾ ಅನುದಾನವನ್ನು ಪಡೆದುಕೊಂಡಿದೆ ಎಂದರು.

ಈ ಸಾಧನೆಗಳ ಹಿನ್ನೆಲೆದಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಜಾಗತಿಕ ಶಿಕ್ಷಣ ಶೃಂಗಸಭೆಯಲ್ಲಿ ಶ್ರೀನಿವಾಸ ಸಂಸ್ಥೆಗಳು ಭಾಗವಹಿಸಿ ತಮ್ಮ ಶೈಕ್ಷಣಿಕ ಸಾಧನೆಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಿವೆ. ಈ ಶೃಂಗಸಭೆಯಲ್ಲಿ ವಿವಿಧ ದೇಶಗಳ ಶಿಕ್ಷಣ ತಜ್ಞರು, ಉದ್ಯಮ ನಾಯಕರು ಹಾಗೂ ಸಂಶೋಧಕರು ಭಾಗವಹಿಸಿದ್ದರು ಎಂದರು.

ಈ ಸಂದರ್ಭದಲ್ಲಿ ಶ್ರೀನಿವಾಸ ಸಂಸ್ಥೆಗಳಿಗೆ ಮೂರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಹೈಯರ್ ಎಜುಕೇಶನ್ ಮತ್ತು ರಿಸರ್ಚ್ ವಿಭಾಗದಲ್ಲಿ ಜಾಗತಿಕ ಶ್ರೇಷ್ಠತಾ ಪ್ರಶಸ್ತಿ, ತಾಂತ್ರಿಕ ಶಿಕ್ಷಣ ಮತ್ತು ಉದ್ಯಮ ಸಂಯೋಜಿತ ಶಿಕ್ಷಣ ವಿಭಾಗದಲ್ಲಿ ಶ್ರೇಷ್ಠತಾ ಪ್ರಶಸ್ತಿ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ ಅವರಿಗೆ ದೂರದರ್ಶಿ ಶಿಕ್ಷಣ ನಾಯಕ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

ಈ ಸಾಧನೆ ಸಂಸ್ಥೆಯ ಶಿಕ್ಷಣ, ಸಂಶೋಧನೆ ಹಾಗೂ ಉದ್ಯಮ ಸಹಭಾಗಿತ್ವದ ಶ್ರೇಷ್ಠತೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ಯಶಸ್ಸು ಕರಾವಳಿ ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೂ ಅಂತರರಾಷ್ಟ್ರೀಯ ಗೌರವ ತಂದಿದೆ ಎಂದು ತಿಳಿಸಿದರು.

ಕುಲಪತಿ ಡಾ. ಸತ್ಯನಾರಾಯಣ ರೆಡ್ಡಿ, ಕುಲಸಚಿವ ಡಾ. ಅನಿಲ್ ಕುಮಾರ್, ಅಭಿವೃದ್ಧಿ ಕುಲಸಚಿವ ಡಾ. ಅಜಯ್ ಕುಮಾರ್ ಹಾಗೂ ಪ್ರಾಂಶುಪಾಲ ಡಾ. ಶ್ರೀನಿವಾಸ ಮಯ್ಯ ಡಿ ಸೇರಿದಂತೆ ಹಲವು ಗಣ್ಯರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *